Belagavi NewsBelgaum NewsLatest

*ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯ ಒದಗಿಸಿ: ಎಎಪಿ ಆಗ್ರಹ*

ಪ್ರಗತಿವಾಹಿನಿ ಸುದ್ದಿ: ಆಮ್ ಆದ್ಮಿ ಪಕ್ಷದ ಸದಸ್ಯರು ಬೆಳಗಾವಿ ಜಿಲ್ಲೆಯ ವಿವಿಧ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿದ್ದು, ಸರ್ಕಾರಿ ಶಾಲೆಗಳು ಅತ್ಯಂತ ಕಳಪೆ ಸ್ಥಿತಿಯಲ್ಲಿವೆ ಹಾಗಾಗಿ ಮೂಲಸೌಕರ್ಯ ಹಾಗೂ ಗುಣಮಟ್ಟದ ಶಿಕ್ಷಣವನ್ನು ನೀಡಬೇಕು ಎಂದು ಆಗ್ರಹಿಸಿದರು.

ಬೆಳಗಾವಿಯ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರಿಗೆ ಎಎಪಿ ವತಿಯಿಂದ ಮನವಿ ಸಲ್ಲಿಸಲಾಯಿತು.‌ ಸರ್ಕಾರಿ ಶಾಲೆಗಳಲ್ಲಿ ಸರ್ಕಾರಿ ನೌಕರರು ಪೂರೈಸಬೇಕು. ಎಲ್ಲಾ ಶಾಲೆಯಲ್ಲಿ 1 ರಿಂದ 4ನೇ ತರಗತಿ ವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ಬೆಂಚ್ ಮತ್ತು ಡೆಸ್ಕ್ ಒದಗಿಸಬೇಕು. ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಬಗ್ಗೆ ಆಡಿಟ್ ನಡೆಸಿ, ಸರ್ಕಾರಿ ಶಾಲೆಯಲ್ಲಿ ಡಿಜಿಟಲ್ ತಂತ್ರಜ್ಞಾನ ಏಕೀಕರಣ ಮಾಡಬೇಕು. ಎಲ್ಲಾ ಸರ್ಕಾರಿ ಶಾಲೆಗಳು ಕ್ರೀಡಾ ಸಾಮಗ್ರಿಗಳೋಂದಿಗೆ ಸರಿಯಾದ ಆಟದ ಮೈದಾನವನ್ನು ಹೊಂದಿರಬೇಕು. ಶಾಲೆಗಳಲ್ಲಿ ಶುದ್ಧ. ಕೂಡಿಯುವ ನೀರಿನ ಘಟಕ, ಶೌಚಾಲಯ ಸೇರಿದಂತೆ ವಿವಿಧ ಸೌಲಭ್ಯ ವದಗಿಸಬೇಕು ಎಂದು ಎಎಪಿ ಸದಸ್ಯ ರಿಜ್ವಾನ್ ಮಕಾಂದರ್ ಒತ್ತಾಯಿಸಿದರು.

Home add -Advt

Related Articles

Back to top button