Belagavi NewsBelgaum NewsKannada NewsKarnataka NewsNationalPolitics

*ಪೆಟ್ರೊಲ್ ಬಂಕ್ ನಲ್ಲಿ ಮಾರಾಮಾರಿ: ಬಿಸಿ ಮುಟ್ಟಿಸಿದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಪೆಟ್ರೋಲ್, ಡೀಸಲ್ ಕೊರತೆ ಉಂಟಾಗಲಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳಿ ಸುದ್ದಿ ಹರಡಾಡಿದ ಪರಿಣಾಮ ಎಲ್ಲಾ ಬಂಕ್ ಗಳಲ್ಲಿ ಇಂಧನ ತುಂಬಿಸಿಕೊಳ್ಳಲು ವಾಹನ ಸವಾರರು ಮುಗಿಬಿದಿದ್ದರು. ಈ ವೇಳೆ ಹೋಡೆದಾಡಿಕೊಂಡ ಯುವಕರಿಗೆ ಪೊಲೀಸರು ಶಾಕ್ ನೀಡಿದ್ದಾರೆ.

ಬೆಳಗಾವಿ ನಗರದ ರಾಮದೇವ ಹೋಟೆಲ್ ಪಕ್ಕದ ಪೆಟ್ರೋಲ್ ಬಂಕ್ ಬಳಿ ನಡೆದ ಭೀಕರ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ಈಗ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. 

ಇಂಧನ ತುಂಬಿಸಿಕೊಳ್ಳಲು ಸರತಿ ಸಾಲಿನಲ್ಲಿ ನಿಂತಿದ್ದ ಕಾಲೇಜು ಯುವಕರ ಬೈಕ್ ಮತ್ತು ವ್ಯಕ್ತಿಯೊಬ್ಬರ ವಾಹನದ ನಡುವೆ ಟಚ್ ಉಂಟಾಗಿತ್ತು. ಇದೇ ಕಾರಣಕ್ಕೆ ಶುರುವಾದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ, ಸಾರ್ವಜನಿಕರ ಎದುರೇ ಇಬ್ಬರ ನಡುವೆ ಭೀಕರ ಮಾರಾಮಾರಿ ನಡೆದಿತ್ತು.

ಈ ಘಟನೆಯು ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಬೆಳಗಾವಿ ಪೊಲೀಸರು, ಸಾರ್ವಜನಿಕ ಶಾಂತಿಗೆ ಭಂಗ ತಂದ ಆರೋಪದ ಮೇಲೆ ಇಬ್ಬರನ್ನು ತಕ್ಷಣವೇ ಬಂಧಿಸಿದ್ದಾರೆ. 

ಇನ್ನು ಮುಂದೆ ಪೆಟ್ರೋಲ್ ಬಂಕ್‌ಗಳ ಬಳಿ ಇಂತಹ ಗಲಾಟೆಗಳು ನಡೆದರೆ ಅಥವಾ ಅಶಿಸ್ತು ತೋರಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button