Belagavi NewsBelgaum NewsCrimeKannada NewsKarnataka NewsNationalPolitics

*ಅಕ್ರಮ ಮದ್ಯ ಮಾರಾಟ: ಎಪಿಎಂಸಿ ಪೊಲೀಸರಿಂದ ಇಬ್ಬರ ಬಂಧನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಸಾರ್ವಜನಿಕ ಸ್ಥಳದಲ್ಲಿ ಅನಧೀಕೃತವಾಗಿ ಅಕ್ರಮ ಸರಾಯಿ ಮಾರಾಟ ಮಾಡುತ್ತಿದ್ದ ವೇಳೆ ಎಪಿಎಂಸಿ ಪೊಲೀಸ್ ಠಾಣೆಯ ಪೊಲೀಸರು ದಾಳಿ ಮಾಡಿ ಇಬ್ಬರನ್ನು ಬಂಧಿಸಿದ್ದಾರೆ.

ಗೌತಮ ಕಲ್ಲಪ್ಪ ಕಲಕಾಂಬಕರ (24), ಸತೀಶ ಯಲ್ಲಪ್ಪ ಚೌಗಲಾ (29) ಬಂಧಿತರು. ಎಪಿಎಂಸಿ ಪೊಲೀಸ್ ಠಾಣೆಯ ಸಿಬ್ಬಂದಿಯವರು ದಾಳಿ ಮಾಡಿದ್ದು. ಆರೋಪಿತರಿಂದ 20,326 ರೂ. ಮೌಲ್ಯದ ಅಕ್ರಮ ಮದ್ಯ ವಶಕ್ಕೆ ಪಡೆಯಲಾಗಿದೆ.  

ಆರೋಪಿಗಳ ವಿರುದ್ಧ ಎಪಿಎಂಸಿ ಪೊಲೀಸ್ ಠಾಣೆ ಪ್ರಕರಣ ಸಂಖ್ಯೆ. 75/2026, ಕಲಂಃ 32, 34 ಅಬಕಾರಿ ಕಾಯ್ದೆ-1965 ನೇದ್ದರ ಪ್ರಕಾರ ಪ್ರಕರಣ ದಾಖಲಾಗಿಸಿಕೊಂಡು ಕಾನೂನು ಕ್ರಮ ಜರುಗಿಸಿ, ಪ್ರಕರಣದ ತನಿಖೆ ಮುಂದುವರೆಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button