Latest

*ಕಾರು ಡಿಕ್ಕಿ ಹೊಡೆಸಿ ದಂಪತಿಯ ಕೊಲೆಗೆ ಯತ್ನ; ಮಹಿಳೆ ಸಾವು*

ಪ್ರಗತಿವಾಹಿನಿ ಸುದ್ದಿ; ಮಂಡ್ಯ: ದಂಪತಿಗೆ ಕಾರು ಡಿಕ್ಕಿಹೊಡೆದು ದುಷ್ಕರ್ಮಿಗಳು ಹತ್ಯೆಗೆ ಯತ್ನಿಸಿದ ಘಟನೆ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಗಾಣಸಂದ್ರ ಗ್ರಾಮದಲ್ಲಿ ನಡೆದಿದೆ.

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆ ಕೊಲೆಯಲ್ಲಿ ಅಂಯವಾಗಿದೆ. ಘಟನೆಯಲ್ಲಿ ಜಯಲಕ್ಷ್ಮೀ (45) ಮೃತಪಟ್ಟಿದ್ದಾರೆ. ವಿಜಯಲಕ್ಷ್ಮಿ ಪತಿ ರಾಮಕೃಷ್ಣ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

Home add -Advt

ಬೆಳ್ಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಹೊಲದಲ್ಲಿ ಉಳುಮೆ ಮಾಡುತಿದ್ದ ದಂಪತಿಗೆ ಕಾರು ಡಿಕ್ಕಿ ಹೊಡೆಸಿ ಹತ್ಯೆಗೆ ಯತ್ನಿಸಲಾಗಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಂಪತಿಯನ್ನು ಆಸ್ಪತ್ರೆಗೆದಾಖಲಿಸಲಾಗಿತ್ತು. ಆದರೆ ಮಹಿಳೆ ಜಯಲಕ್ಷ್ಮಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಪ್ರಕರಣ ಸಂಬಂಧ ಗೌಡಯ್ಯ, ಅನಿಲ್, ಗೌಡಯ್ಯ ಪತ್ನಿ ಸೇರಿ ಮೂವರನ್ನು ಬೆಳ್ಳೂರು ಪೊಲೀಸರು ಬಂಧಿಸಿದ್ದಾರೆ.

ತಿರುಪತಿ ತಿಮ್ಮಪ್ಪನ ಹುಂಡಿಗೆ ಹರಿದು ಬಂತು ರಾಶಿ ರಾಶಿ ಹಣ

https://pragati.taskdun.com/more-than-thousend-cr-donation-collected-at-tirupati-timmappa-temple/

Related Articles

Back to top button