Kannada NewsLatest

ಯಕ್ಸಂಬಾ ಪಟ್ಟಣದಲ್ಲಿ ಬಸವಪ್ರಸಾದ ಜೊಲ್ಲೆ ಹಾಗೂ ಕಾರ್ಯಕರ್ತರಿಂದ ಬಿಜೆಪಿ ಸ್ಥಾಪನಾ ದಿನಾಚರಣೆ

ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಇಂದು ಯಕ್ಸಂಬಾ ಪಟ್ಟಣದ ಜೊಲ್ಲೆ ಉದ್ಯೋಗ ಸಮೂಹದ ಸಭಾ ಭವನದಲ್ಲಿ 41 ನೇ ಬಿಜೆಪಿ ಸ್ಥಾಪನಾ ದಿನದ ಅಂಗವಾಗಿ ಶ್ರೀ ಶ್ಯಾಮ ಪ್ರಸಾದ ಮುಖರ್ಜಿ ಹಾಗೂ ಶ್ರೀ ದೀನದಯಾಳ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಬಸವಜ್ಯೋತಿ ಯೂಥ್ ಫೌಂಡೇಶನ್ ಅಧ್ಯಕ್ಷರಾದ ಬಸವಪ್ರಸಾದ ಜೊಲ್ಲೆ ಪುಷ್ಪನಮನ ಸಲ್ಲಿಸಿದರು.

ಬಳಿಕ ಪ್ರಧಾನಿ ನರೇಂದ್ರ ಮೋದಿಯವರ ವಿಡಿಯೋ ಕಾನ್ಫರೆನ್ಸ ಕಾರ್ಯಕ್ರಮದ ನೇರಪ್ರಸಾರವನ್ನು ಪಕ್ಷದ ಕಾರ್ಯಕರ್ತರೊಡಗೂಡಿ ವಿಕ್ಷೀಸಿದರು.

ಈ ಸಂದರ್ಭದಲ್ಲಿ ಚಿಕ್ಕೋಡಿ ಸದಲಗಾ ಮಂಡಲ ಅಧ್ಯಕ್ಷರಾದ ಸಂಜಯ ಪಾಟೀಲ, ಬೀರೇಶ್ವರ ಸಂಸ್ಥೆಯ ಅಧ್ಯಕ್ಷರಾದ ಜಯಾನಂದ ಜಾಧವ, ಜ್ಯೋತಿ ಸಂಸ್ಥೆಯ ನಿರ್ದೇಶಕರಾದ ಕಲ್ಲಪ್ಪ ಜಾಧವ, ಲಕ್ಷ್ಮಣ ಕಬಾಡೆ, ಮತಾಬ ಮಕಾಂದರ, ಬಿಜೆಪಿ ಮಂಡಲ ಸದಸ್ಯರು, ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಬಿಜೆಪಿಗೆ ಬುದ್ದಿ ಕಲಿಸಲು ಜನರು ಕಾಯುತ್ತಿದ್ದಾರೆ – ರಾಮಲಿಂಗಾ ರಡ್ಡಿ

Home add -Advt

Related Articles

Back to top button