Kannada NewsKarnataka NewsLatest
*ಹೃದಯಾಘಾತಕ್ಕೆ ಮತ್ತೋರ್ವ ವಿದ್ಯಾರ್ಥಿ ಸಾವು*

ಪ್ರಗತಿವಾಹಿನಿ ಸುದ್ದಿ; ಉಡುಪಿ: ಪಿಯುಸಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.
17 ವರ್ಷದ ಅಫ್ಕಾರ್ ಮೃತ ಪಿಯುಸಿ ವಿದ್ಯಾರ್ಥಿ. ಉಡುಪಿಯ ಕಲ್ಯಾಣಪುರದ ಮಿಲಾಗ್ರಿಸ್ ಪಿಯು ಕಾಲೇಜು ವಿದ್ಯಾರ್ಥಿಯಾಗಿದ್ದ. ಅಫ್ಕಾರ್ ಗೆ ಹುಟ್ಟಿನಿಂದಲೂ ಹೃದಯಸಂಬಂಧಿ ಕಾಯಿಲೆಯಿತ್ತು ಎನ್ನಲಾಗಿದೆ.
ಹೃದಯಸಂಬಂಧಿ ಕಾಯಿಲೆಗೆ ಅಫ್ಕಾರ್ ಡಿಸೆಂಬರ್ 6ರಂದು ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆದಿದ್ದ. ಡಿ.18ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ವಾಪಾಸ್ ಆಗಿದ್ದ. ಮನೆಗೆ ಹಿಂದಿರುಗಿದ ಅಫ್ಕಾರ್ ಆರೋಗ್ಯದಲ್ಲಿ ಏರುಪೇರಾಗಿತ್ತು. ಈ ಹಿನ್ನೆಲೆಯಲ್ಲಿ ಆತನನ್ನು ಮತ್ತೆ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಫ್ಕಾರ್ ನನ್ನು ಆಸ್ಪತ್ರೆಗೆ ಸಾಗಿಸುವ ವೇಳೆಯೇ ಕೊನೆಯುಸಿರೆಳೆದಿದ್ದಾನೆ.




