Kannada NewsLatest

ಸತ್ಯಕ್ಕೆ ಸೋಲಿಲ್ಲ; ಸತ್ಯದ ತಳಹದಿಯಿಂದ ಎದ್ದು ಗೆದ್ದು ಬರುವೆನು

ಪ್ರಗತಿವಾಹಿನಿ ಸುದ್ದಿ; ಧಾರವಾಡ: ರಾಜಕೀಯ ದುರುದ್ದೇಶದಿಂದ ತಮ್ಮನ್ನು ಬಂಧಿಸಲಾಗಿದೆ ಎಂದಿರುವ ಮಾಜಿ ಸಚಿವ ವಿನಯ್ ಕುಲ್ಕರ್ಣಿ, ಸತ್ಯಕ್ಕೆ ಸೋಲಿಲ್ಲ. ಸುಳ್ಳು ಕುಣಿಯುತ್ತಿರುವಾಗ ಸತ್ಯ ಅಳುತ್ತದೆ; ಸತ್ಯ ಎದ್ದು ನಿಂತಾಗ ಸುಳ್ಳು ಸತ್ತೇ ಹೋಗುತ್ತದೆ ಎಂದು ಹೇಳಿದ್ದಾರೆ.

ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿರುವ ಕುಲ್ಕರ್ಣಿ, ಬಿದ್ದು, ಎದ್ದು, ಗೆದ್ದು ಬರುವೆನು. ಸತ್ಯದ ತಳಹದಿಯಿಂದ ಎದ್ದು, ಗೆದ್ದು ಬರುವೆನು. ಸತ್ಯಕ್ಕೆ ಸೋಲಿಲ್ಲ, ನನ್ನೆಲ್ಲಾ ಪ್ರೀತಿ ಪಾತ್ರರಿಗೆ ನನ್ನ ಮೇಲಿಟ್ಟಿರುವ ನಂಬಿಕೆಗೆ ನಾನು ಚಿರಋಣಿ, ನಿಮ್ಮೆಲ್ಲರ ಹಾರೈಕೆ ಹಾಗೂ ನಂಬಿಕೆ ಎಂದೂ ಸುಳ್ಳಾಗುವುದಿಲ್ಲ ಎಂದು ಬರೆದುಕೊಂಡಿದ್ದಾರೆ.

Related Articles

Back to top button