Kannada NewsKarnataka NewsLatest
*ದೇವಸ್ಥಾನದಲ್ಲಿ ಪ್ರಸಾದ ಸೇವಿಸಿದ ಮಹಿಳೆ ದುರ್ಮರಣ*

ಹಲವರು ಅಸ್ವಸ್ಥ
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದೇವಸ್ಥಾನದ ಪ್ರಸಾದ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಹೊರವಲಯದ ದೇವನಹಳ್ಳಿಯಲ್ಲಿ ನಡೆದಿದೆ.
ಸಿದ್ದಗಂಗಮ್ಮ (60) ಮೃತ ಮಹಿಳೆ. ಹನುಮ ಜಯಂತಿ ಹಿನ್ನೆಲೆಯಲ್ಲಿ ಹೊಸಕೋಟೆಯ ವೆಂಕಟರಮಣ ಸ್ವಾಮಿ, ಊರಬಾಗಿಲು ಆಂಜನೇಯ, ಕೋಟೆ ಆಂಜನೇಯಸ್ವಾಮಿ ದೇವಾಲಯಗಳಲ್ಲಿ ಭಕ್ತರು ಪುಳಿಯೊಗರೆ, ಪಾಯಸ, ಲಡ್ಡು ಸೇವಿಸಿದ್ದರು. ಪ್ರಸಾದ ಸೇವಿಸಿದ ಹಲವು ಭಕ್ತರು ಅಸ್ವಸ್ಥರಾಗಿದ್ದಾರೆ.
ಅಸ್ವಸ್ಥರನ್ನು ಹೊಸಕೋಟೆ, ಬೆಂಗಳೂರು, ಕೋಲಾರ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಹೊಸಕೋಟೆ ಸಿಲಿಕಾನ್ ಸಿಟಿ ಆಸ್ಪತ್ರೆಗೆ ದಾಖಲಾಗಿರುವ 15ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ. ಇದೀಗ ಸಿಲಿಕಾನ್ ಸಿಟಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಸಿದ್ದಗಂಗಮ್ಮ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಮೃತ ಮಹಿಳೆ ಹೊಸಕೋಟೆಯ ಕಾವೇರಿ ನಗರ ನಿವಾಸಿ ಎಂದು ತಿಳಿದುಬಂದಿದೆ.



