
ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಕ್ಷುಲ್ಲಕ ಕಾರಣಕ್ಕಾಗಿ ಮಗನೇ ತನ್ನ ತಂದೆಯನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮಾಚಗೊಂಡನಹಳ್ಳಿಯಲ್ಲಿ ನಡೆದಿದೆ.
ತಮ್ಮೇಗೌಡ (70) ಮೃತ ತಂದೆ. ಮಗ ಸತೀಶ್ ಟ್ರ್ಯಾಕ್ಟರ್ ಗಾಗಿ ಖಾಸಗಿ ಬ್ಯಾಂಕಿನಿಂದ ಸಾಲ ಪಡೆದುಕೊಂಡಿದ್ದ. ಸಾಲ ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ಬ್ಯಾಂಕ್ ಸಿಬ್ಬಂದಿ ಮನೆಗೆ ಬಂದು ಕೇಳಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕಾಗಿ ಕೋಪಗೊಂಡ ಮಗ ತಂದೆಯನ್ನೇ ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.
ಸಖರಾಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ: ನಾಲ್ವರು ಯುವತಿಯರ ರಕ್ಷಣೆ
ಗುಂಡು ಹಾರಿಸುವುದನ್ನು ಕಲಿಸುತ್ತ ಪತ್ನಿಯ ತಲೆಗೆ ಗುಂಡಿಟ್ಟು ಕೊಂದ ಪತಿ