Latest

ಶ್ರುತಿ ಹರಿಹರನ್ ಮೀಟೂ ಕೇಸ್; ಬಿ ರಿಪೋರ್ಟ್ ಮಾನ್ಯ ಮಾಡಿದ ಕೋರ್ಟ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಟ ಅರ್ಜುನ್ ಸರ್ಜಾ ವಿರುದ್ಧದ ಮೀಟೂ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ ರಿಪೋರ್ಟ್ ಮಾನ್ಯ ಮಾಡಿರುವ ಕೋರ್ಟ್, ನಟನಿಗೆ ಬಿಗ್ ರಿಲೀಫ್ ನೀಡಿದೆ.

ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ 2018ರಲ್ಲಿ ಮೀಟೂ ಆರೋಪ ಮಾಡಿದ್ದರು. ವಿಸ್ಮಯ ಚಿತ್ರದ ಚಿತ್ರೀಕರಣದ ವೇಳೆ ಅರ್ಜುನ್ ಸರ್ಜಾ ತನಗೆ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಆರೋಪಿಸಿ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

Home add -Advt

ತನಿಖೆ ಸಮಯದಲ್ಲಿ ಆರೋಪಿಯನ್ನು ವಿಚಾರಣೆಗೆ ಗುರಿಪಡಿಸಲು ಅಗತ್ಯ ಇರುವಷ್ಟು ಸಾಕ್ಷಾಧಾರಗಳು ಸಿಗಲಿಲ್ಲ ಎಂಬ ಕಾರಣಕ್ಕೆ ಪೊಲೀಸರು ನ್ಯಾಯಾಲಯಕ್ಕೆ ನ.29ರಂದು ಬಿ ರಿಪೋರ್ಟ್ ಸಲ್ಲಿಸಿದ್ದರು. ಬಿ ರಿಪೋರ್ಟ್ ಗೆ ಆಕ್ಷೇಪಣೆ ಸಲ್ಲಿಸಲು ನಟಿ ಶ್ರುತಿ ಹರಿಹರನ್ ಗೆ ಈವರಗೆ ಕಾಲಾವಕಾಶವಿತ್ತು. ಆದರೆ ಶ್ರುತಿ ಹರಿಹರನ್ ಆಕ್ಷೇಪಣೆ ಸಲ್ಲಿಸದ ಹಿನ್ನೆಲೆಯಲ್ಲಿ 8ನೇ ಎಸಿಎಂಎಂ ನ್ಯಾಯಾಲಯ ಬಿ ರಿಪೋರ್ಟ್ ಮಾನ್ಯ ಮಾಡಿದೆ. ಈ ಹಿನ್ನೆಲೆಯಲ್ಲಿ ನಟ ಅರ್ಜುನ್ ಸರ್ಜಾ ವಿರುದ್ಧದ ಮೀಟೂ ಪ್ರಕರಣ ಇತ್ಯರ್ಥಗೊಂಡಿದೆ.
ಬೆಳಗಾವಿ ಖಾಸಗಿ ಕಾಲೇಜಿನ 18 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

Related Articles

Back to top button