
ಪ್ರಗತಿವಾಹಿನಿ ಸುದ್ದಿ: ತಹಶಿಲ್ದಾರ್ ಕಿರುಕುಳಕ್ಕೆ ಬೇಸತ್ತು ಶಿರಸ್ತೆದಾರ್ ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕು ಕಚೇರಿ ಆವರಣದಲ್ಲಿ ಈ ಘಟನೆ ನಡೆದಿದೆ. ತನ್ವೀರ್ ಅಹ್ಮದ್ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಶಿರಸ್ತೇದಾರ್.
ತಹಶಿಲ್ದಾರ್ ಶ್ರೀಧರ್ ಕಂಕನವಾಡಿ ವಿರುದ್ಧ ಆರೋಪ ಮಾಡಿರುವ ಶಿರಸ್ತೇದಾರ್, ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದರ್. ಹಾಗೂ ಬೇಕಂತಲೇ ಕೆಲಸದ ಒತ್ತಡ ಹೇರುತ್ತಿದ್ದರು ಎಂದು ಆರೋಪಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಮಾತ್ರೆ ಸೇವಿಸಿ ಅವಸ್ಥರಾಗಿದ್ದ ಶಿರಸ್ತೇದಾರ್ ತನ್ವೀರ್ ಅವರನ್ನು ಬೇಲೂರು ಆಸ್ಪತ್ರೆಗೆ ದಾಖಲಿಸಲಾಗಿದೆ.



