Latest

ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳಾ ತಹಶೀಲ್ದಾರ್

ಪ್ರಗತಿವಾಹಿನಿ ಸುದ್ದಿ; ಬೀದರ್: ಬರೋಬ್ಬರಿ 15 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಮಹಿಳಾ ತಹಶೀಲ್ದಾರ್ ಓರ್ವರು ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಬೀದರ್ ನಲ್ಲಿ ನಡೆದಿದೆ.

ತಹಶೀಲ್ದಾರ್ ಗಂಗಾದೇವಿಯವರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಬೀದರ್ ನ ಲೀಲಾಧರ್ ಎನ್ನುವವರಿಗೆ ಸೇರಿದ್ದ ಸರ್ವೆ ನಂಬರ್ 15ರ ಭೂಮಿ ಮುಟೇಷನ್ ಮಾಡಲು ತಹಶೀಲ್ದಾರ್ ಗಂಗಾದೇವಿ 20 ಲಕ್ಷ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದರು. 15 ಲಕ್ಷ ಕೊಡುವುದಾಗಿ ಲೀಲಾಧರ್ ಒಪ್ಪಿದ್ದರು ಎನ್ನಲಾಗಿದೆ.

Home add -Advt

ಈ ಹಿನ್ನೆಲೆಯಲ್ಲಿ ಹಣವನ್ನು ತಹಶ್ಲೀರ್ ತಮ್ಮ ಮನೆಗೆ ತಂದು ಕೊಡುವಂತೆ ಹೇಳಿದ್ದರು. 15 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ತಹಶೀಲ್ದಾರ್ ಗಂಗಾದೇವಿ ಎಸಿಬಿ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಎಸಿಬಿ ಅಧಿಕಾರಿ ಮಹೇಶ್ ಮೇಘಣ್ಣನವರ್ ನೇತೃತ್ವದಲ್ಲಿ ದಾಳಿ ನಡೆದಿದೆ.
ಅಪ್ರಾಪ್ತ ಬಾಲಕಿಗೆ ಕಿರುಕುಳ; ಹೆಡ್ ಕಾನ್ಸ್ ಟೇಬಲ್ ಬಂಧನ

Related Articles

Back to top button