Karnataka NewsLatest

*ತಹಶಿಲ್ದಾರ್ ಕಚೇರಿಯಲ್ಲಿ ಬೆಂಕಿ ಅವಘಡ*

ಪ್ರಗತಿವಾಹಿನಿ ಸುದ್ದಿ: ತಹಶಿಲ್ದಾರ್ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿ ಮಹತ್ವದ ದಾಖಲೆಗಳೆಲ್ಲವೂ ಸುಟ್ಟು ಹೋಗಿರುವ ಘಟನೆ ನಡೆದಿದೆ.

ರಾಯಚೂರು ಜಿಲ್ಲೆಯ ದೇವದುರ್ಗ ತಾಕೂಕಿನ ಗಬ್ಬೂರು ನಾಡ ಕಚೇರಿಯಲ್ಲಿ ಈ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ಕಂಪ್ಯೂಟರ್, ಪೀಠೋಪಕರಣಗಳು, ದಾಖಲೆ ಪತ್ರಗಳು ಸುಟ್ಟು ಕರಕಲಾಗಿವೆ.

ಇನ್ವರ್ಟರ್ ಸ್ಫೋಟಗೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಗಬ್ಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button