ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧಿಸಲ್ಪಟ್ಟಿರುವ ಕೆ.ಆರ್.ಪುರಂ ತಹಶೀಲ್ದಾರ್ ಅಜಿತ್ ರೈ ಅವರನ್ನು 7 ದಿನಗಳ ಕಾಲ ಲೋಕಾಯುಕ್ತ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಅಜಿತ್ ರೈ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದ ವೇಳೆ ಅಪಾರ ಪ್ರಮಾಣದ ಆಸ್ತಿ, ನಗದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ನಿನ್ನೆ ಅಜಿತ್ ರೈ ಅವರನ್ನು ಬಂಧಿಸಿದ್ದ ಲೋಕಾಯುಕ್ತ ಪೊಲೀಸರು ಇಂದು ಕೋರ್ಟ್ ಗೆ ಹಾಜರು ಪಡಿಸಿದ್ದಾರೆ.
ಈ ವೇಳೆ ಲೋಕಾಯುಕ್ತ ಪೊಲೀಸರು ಹೆಚ್ಚಿನ ತನಿಖೆಗಾಗಿ 10 ದಿನ ವಶಕ್ಕೆ ನೀಡುವಂತೆ ಕೋರ್ಟ್ ಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಜುಲೈ 6ರವರೆಗೆ 7 ದಿನಗಳ ಕಾಲ ಕಸ್ಟಡಿಗೆ ನೀಡಿದೆ. ಅಲ್ಲದೇ ಅಜಿತ್ ರೈ ಅವರ ಊರಾದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಕರೆದೊಯ್ದು ತನಿಖೆ ನಡೆಸಲು ಸಹ ಅನುಮತಿ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ