
ಪ್ರಮಾಣವಚನ ಸ್ವೀಕಾರಕ್ಕೆ ಬೆಳಗಾವಿಗೆ ಬನ್ನಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –
ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ಸರಕಾರ ಅಧಿಕಾರಕ್ಕೆ ಬರಲಿದೆ ಎನ್ನುವುದು ಖಚಿತವಾಗುತ್ತಿದ್ದಂತೆ ನೆಟ್ಟಿಗರು ಜಾಗ್ರತರಾಗಿದ್ದಾರೆ.
ಮೈತ್ರಿ ಪಕ್ಷಗಳ ಸರಕಾರ ಪತನವಾಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಗಳು ಹರಿದಾಡತೊಡಗಿವೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಬಳಗಾವಿಯ ಸುವರ್ಣ ವಿಧಾನಸೌಧದ ಎದುರು ಪ್ರಮಾಣ ವಚನ ಸ್ವೀಕರಿಸಬೇಕೆಂದು ಆಹ್ವಾನಿಸುವ ಪೋಸ್ಟ್ ಗಳು ವೈರಲ್ ಆಗಿವೆ.
ರೈತ ನಾಯಕರಾಗಿರುವ ಯಡಿಯೂರಪ್ಪನವರೇ ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರು ಪ್ರಮಾಣ ವಚನ ಸ್ವೀಕರಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿ ಮಾಡಿ ಎಂದು ವಿನಂತಿಸಲಾಗಿದೆ.

ಬಿ.ಎಸ್.ಯಡಿಯೂರಪ್ಪ ಉಪಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ, 2006, ಏಪ್ರಿಲ್ 6ರಂದು ಬೆಳಗಾವಿಗೆ ಅಂದಿನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲೇ ಬೆಳಗಾವಿಯಲ್ಲಿ ಸುವರ್ಣ ವಿಧಾನಸೌಧ ಕಟ್ಟುವ ಘೋಷಣೆ ಮಾಡಲಾಗಿತ್ತು.

ನಂತರ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಸುವರ್ಣ ವಿಧಾನಸೌಧಕ್ಕೆ ಭೂಮಿ ಪೂಜೆ ನೆರವೇರಿಸಲಾಗಿತ್ತು. ಜಗದೀಶ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದ ವೇಳೆ ಅದರ ಉದ್ಘಾಟನೆ ನಡೆಯಿತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ