Latest

*4 ದಿನಗಳ ಕಾಲ ಭಾರಿ ಮಳೆ ಎಚ್ಚರಿಕೆ; ಹವಾಮಾನ ಇಲಾಖೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಪರ್ ಜಾಯ್ ಚಂಡಮಾರುತ ಅರಬ್ಬಿ ಸಮುದ್ರದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದ್ದು, ದೇಶದ ಕರಾವಳಿ ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ರಾಜ್ಯದಲ್ಲಿಯೂ ಇನ್ನೂ ನಾಲ್ಕು ದಿನಗಳ ಕಾಲ ಧಾರಾಕಾರ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿಯಲ್ಲಿ ಇನ್ನೂ ಎರಡು ದಿನಗಳ ಕಾಲ ಚಂಡಮಾರುತದ ಎಫೆಕ್ಟ್ ಇರಲಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ. ಮೀನುಗಾರರು, ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಹೈ ಅಲರ್ಟ್ ಘೋಷಿಸಲಾಗಿದೆ.

Home add -Advt

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳುರು, ಹಾಸನ, ಕೊಡಗು, ಶಿವಮೊಗ್ಗ ಹಾಗೂ ಉತ್ತರ ಒಳನಾಡಿನ ಹಲವೆಡೆಗಳಲ್ಲಿ ಧಾರಾಕಾರ ಮಳೆಯಾಗುವ ಸಂಭವವಿದ್ದು, ಅಲರ್ಟ್ ಘೋಷಣೆ ಮಾಡಿದೆ.

ಗುಜರಾತ್ ನ ಕಚ್, ಮುಲ್ ದ್ವಾರಕ್ ಪ್ರದೇಶಗಳಲ್ಲಿ ಸಮುದ್ರದಲ್ಲಿ ಬೃಹತ್ ಅಲೆಗಳು ಏಳುತ್ತಿದ್ದು, ತೀರ ಪ್ರದೇಶದ ಮನೆಗೋಡೆಗಳಿಗೆ ಅಪ್ಪಳಿಸುತ್ತಿವೆ. ಕರಾವಳಿ ಭಾಗದಲ್ಲಿ ಬಿರುಗಾಳಿ, ಮಳೆಯಿಂದಾಗಿ ಜನರು ಕಂಗಾಲಾಗಿದ್ದಾರೆ. ಇನ್ನು ಮಹಾರಾಷ್ಟ್ರದ ರತ್ನಗಿರಿ ಪ್ರದೇಶದಲ್ಲಿ ಸಮುದ್ರದಲ್ಲಿ ಏಕಾಏಕಿ ಬೃಹತ್ ಅಲೆಗಳು ಏಳುತ್ತಿದ್ದು, ಪ್ರವಾಸಿಗರನ್ನು ತಲ್ಲಣಗೊಳಿಸಿದೆ.

Related Articles

Back to top button