National

*ಬಿಎಸ್ ಪಿ ರಾಜ್ಯಾಧ್ಯಕ್ಷನ ಹತ್ಯೆ ಪ್ರಕರಣ: 8 ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ: ಬಹುಜನ ಸಮಾಜವಾದಿ ಪಕ್ಷದ ತಮಿಳುನಾಡು ರಾಜ್ಯಾಧ್ಯಕ್ಷ ಆರ್ಮಾಸ್ಟ್ರಾಂಗ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೆನ್ನೈ ಪೊಲೀಸರು 8 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. 

ಚೆನ್ನೈ ಸಮೀಪದ ಪೆರಂಬೂರ್ ಬಳಿಯ ಅವರ ನಿವಾಸಕ್ಕೆ ಬೈಕ್ ನಲ್ಲಿ ಆಗಮಿಸಿದ 6 ಮಂದಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಆರ್ಮಾಸ್ಟ್ರಾಂಗ್ ಅವರನ್ನು ಹತ್ಯೆಗೈದಿದ್ದರು. ಘಟನೆ ಬೆನ್ನಲ್ಲೇ ಚೆನ್ನೈ ಪೊಲೀಸರು 8 ಮಂದಿ ಶಂಕಿತರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ ಎಂದು ಚೆನ್ನೈ ಸೂಪರಿಟೆಂಡೆಂಟ್ ಆಸ್ರಾ ಗರ್ಗ್ ದೃಢಪಡಿಸಿದ್ದಾರೆ.

ಹತ್ಯೆ ಘಟನೆ ಬೆನ್ನಲ್ಲೇ ಪೊಲೀಸರ 10 ವಿಶೇಷ ತಂಡವನ್ನು ರಚಿಸಲಾಗಿದ್ದು, ಘಟನಾ ಸ್ಥಳದ ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಿದ್ದಾರೆ. ಸಿಸಿಟಿವಿಯಲ್ಲಿ ಕೃತ್ಯ ಎಸಗುತ್ತಿದ್ದಂತೆ ಆರೋಪಿಗಳು ಪರಾರಿ ಆಗಿರುವುದು ಕಂಡುಬಂದಿದೆ. 6 ಜನ ದುಷ್ಕರ್ಮಿಗಳು ಬಿಎಸ್ ಪಿ ರಾಜ್ಯಾಧ್ಯಕ್ಷ ಆರ್ಮಸ್ಟ್ರಾಂಗ್ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಆರ್ಮಾಸ್ಟ್ರಾಂಗ್ ಅವರ ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button