ಪ್ರಗತಿವಾಹಿನಿ ಸುದ್ದಿ; ಚೆನ್ನೈ: ದೇಶಾದ್ಯಂತ ಕೊರೊನಾ ಸೋಂಕು ಮತ್ತೆ ಅಟ್ಟಹಾಸ ಮೆರೆಯುತ್ತಿದ್ದು, ತಮಿಳು ಖ್ಯಾತ ನಟ ವಿಜಯ್ ಕಾಂತ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವಿಜಯ್ ಕಾಂತ್ ಅವರಿಗೆ ನಾಲ್ಕು ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಬಂದಿತ್ತು. ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿಜಯ್ ಕಾಂತ್ ಮೃತಪಟ್ಟಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು.
1952ರಲ್ಲಿ ಮಧುರೈಯಲ್ಲಿ ಜನಿಸಿದ್ದ ವಿಜಯ್ ಕಾಂತ್ 80ರ ದಶಕದಲ್ಲಿ ಚಿತ್ರರಂಗ ಪ್ರವೇಶಿಸಿದ್ದರು. 150ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. ಚಿತ್ರರಂಗದಿಂದ ದೂರವಾಗಿ 2005ರಲ್ಲಿ ವಿಜಯ್ ಕಾಂತ್ ಡಿಎಂಡಿಕೆ ಪಕ್ಷ ಸ್ಥಾಪಿಸಿದ್ದರು. 2016ರಲ್ಲಿ ತಮಿಳುನಾಡು ವಿಧಾನಸಭೆ ವಿಪಕ್ಷ ನಾಯಕನಾಗಿದ್ದರು. ಇತ್ತೀಚೆಗೆ ಅನಾರೋಗ್ಯ ಕಾರಣದಿಂದಾಗಿ ರಾಜಕೀಯದಲ್ಲಿಯೂ ಅಷ್ಟಾಗಿ ತೊಡಗಿಸಿಕೊಂಡಿರಲಿಲ್ಲ ಎನ್ನಲಾಗಿದೆ.
ಇದೀಗ ವಿಜಯ್ ಕಾಂತ್ ಕೋವಿಡ್ ಗೆ ಬಲಿಯಾಗಿದ್ದು, ತಮಿಳು ಚಿತ್ರರಂಗ ಹಿರಿಯ ನಟನ ಅಗಲಿಕೆಗೆ ಕಂಬನಿ ಮಿಡಿದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ