Film & EntertainmentKannada NewsLatest

*ಪತಿಯೊಂದಿಗೆ ವಿಡಿಯೋ ಕಾಲ್ ನಲ್ಲಿದ್ದಾಗಲೇ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆಗೆ ಶರಣಾದ ನಟಿ*

ಪ್ರಗತಿವಾಹಿನಿ ಸುದ್ದಿ: ಕಾಲಿವುಡ್ ಖ್ಯಾತ ನಟಿಯೊಬ್ಬರು ಪತಿಯೊಂದಿಗೆ ವಿಡಿಯೋ ಕಾಲ್ ನಲ್ಲಿದ್ದಾಗಲೇ ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ನಡೆದಿದೆ.

ಸುಭಾಷಿಣಿ ಆತ್ಮಹತ್ಯೆಗೆ ಶರಣಾಗಿರುವ ನಟಿ. ತಮಿಳು ಸಿನಿಮಾಅ ಹಾಗೂ ಧಾರಾವಾಹಿಗಳಲ್ಲಿ ಅಭಿನಯಿಸಿ ಜನಪ್ರಿಯತೆ ಪಡೆದಿದ್ದ ಸುಭಾಷಿಣಿ, ಪತಿಯೊಂದಿಗೆ ವಿಡಿಯೋ ಕಾಲ್ ನಲ್ಲಿ ಮಾತನಾಡುತ್ತಿದ್ದಾಗಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶ್ರೀಲಂಕಾ ಮೂಲದವರಾದ ಸುಭಾಷಿಣಿ ಅಲಿಯಾಸ್ ಸಾಸ್ವಿಬಾಲಾ ೨೦೨೪ರಲ್ಲಿ ಬೆಂಗಳೂರು ಮೂಲದ ಬಿಪಿನ್ ಚಂದ್ರನ್ ಅವರನ್ನು ವಿವಾಹವಾಗಿ ಬೆಂಗಳೂರಿನಲ್ಲಿಯೇ ನೆಲೆಸಿದ್ದರು. ಸಿನಿಮಾ, ಧಾರಾವಾಹಿ ಚಿತ್ರೀಕರಣಕ್ಕಾಗಿ ಚೆನ್ನೈಗೆ ಹೋಗಿಬಂದು ಮಾಡುತ್ತಿದ್ದರು. ಕೆಲ ತಿಂಗಳ ಹಿಂದೆ ಚೆನ್ನೈನ ಪೊರೂರು ಬಳಿಯ ಅಯ್ಯಪ್ಪಂತಂಗಲ್ ಎಂಬಲ್ಲಿ ಅಪಾರ್ಟ್ ಮೆಂಟ್ ವೊಂದರಲ್ಲಿ ಮನೆಯೊಂದನ್ನು ಬಾಡಿಗೆಗೆ ಪಡೆದಿದ್ದರು.

ಮಾರ್ಚ್ 3ರಂದು ಪೊರೂರು ಬಳಿಯ ಮನೆಗೆ ಬಂದಿದ್ದರು. ಏಪ್ರಿಲ್ 5ರಂದು ರಾತ್ರಿ ಸುಭಾಷಿಣಿ ತನ್ನ ಬಾಡಿಗೆ ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆತ್ಮಹತ್ಯೆಗೂ ಮುನ್ನ ಅವರು ಪತಿಯೊಂದಿಗೆ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದರು. ಈ ವೇಳೆ ಇಬ್ಬರ ನಡಿವೆ ವಾಗ್ವಾದ ನಡೆದಿದೆ. ಪತಿ ವಿಡಿಯೋ ಕಾಲ್ ನಲ್ಲಿರುವಾಗಲೇ ಸುಭಾಷಿಣಿ ನೇಣಿಗೆ ಕೊರಳೊಡ್ಡಿದ್ದಾರೆ. ತಕ್ಷಣ ಅವರ ಪತಿ ಅಪಾರ್ಟ್ ಮೆಂಟ್ ನ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸಿಬ್ಬಂದಿ ಪೊರೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಸುಭಾಷಿಣಿ ಅವರನ್ನು ಆಸ್ಪತ್ರೆಗೆ ಕೆರೆದೊಯ್ದುದ್ದಾರೆ. ಆದರೆ ಅಷ್ಟರಲ್ಲಿಯೇ ಅವರು ಕೊನೆಯುಸಿರೆಳೆದಿದ್ದರು.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button