
ಪ್ರಗತಿವಾಹಿನಿ ಸುದ್ದಿ, ಚೆನ್ನೈ: ಜೆಸಿಬಿ ಯಂತ್ರಕ್ಕೆ ಹಾನಿ ಮಾಡಿದ ಆರೋಪದ ಮೇಲೆ ತಮಿಳುನಾಡು ಬಿಜೆಪಿ ಮುಖಂಡ ಅಮರ್ ಪ್ರಸಾದ್ ರೆಡ್ಡಿ ಅವರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಚೆನ್ನೈನಲ್ಲಿರುವ ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ ಅವರ ನಿವಾಸದ ಹೊರಗಿರುವ ಅನಧಿಕೃತ ಧ್ವಜಸ್ತಂಭ ತೆರವುಗೊಳಿಸಲು ಜೆಸಿಬಿ ಯಂತ್ರ ತರಲಾಗಿತ್ತು. ಈ ವೇಳೆ ಅಮರಪ್ರಸಾದ ರೆಡ್ಡಿ ಅವರು ಜೆಸಿಬಿ ಯಂತ್ರಕ್ಕೆ ಹಾನಿ ಮಾಡಿದ್ದಾಗಿ ಆರೋಪಿಸಲಾಗಿದೆ.
ರೆಡ್ಡಿ ಅವರನ್ನು ಪೊಲೀಸರು ಬಂಧಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ