ಪ್ರಗತಿವಾಹಿನಿ ಸುದ್ದಿ, ಚೆನ್ನೈ: ಮಧುರೈ ಸಂಸದ ಹಾಗೂ ಸಿಪಿಐ(ಎಂ) ಮುಖಂಡ ವೆಂಕಟೇಶನ್ ಅವರ ವಿರುದ್ಧ ಟ್ವೀಟ್ ಮಾಡಿದ್ದಕ್ಕಾಗಿ ತಮಿಳುನಾಡು ಬಿಜೆಪಿ ಕಾರ್ಯದರ್ಶಿ ಎಸ್.ಜಿ ಸೂರ್ಯ ಅವರನ್ನು ಬಂಧಿಸಲಾಗಿದೆ.
ಮಲ ತುಂಬಿದ್ದ ಚರಂಡಿಯೊಂದನ್ನು ಸ್ವಚ್ಛಗೊಳಿಸಲು ಹೋದ ಸಂದರ್ಭದಲ್ಲಿ ಸ್ವಚ್ಛತಾ ಕಾರ್ಯಕರ್ತೆಯೊಬ್ಬರು ಮೃತಪಟ್ಟಿದ್ದರು. ನಂತರದಲ್ಲಿ ಈ ಬಗ್ಗೆ ಟ್ವೀಟ್ ಮಾಡಿದ ಸೂರ್ಯ ಅವರು ವೆಂಕಟೇಶನ್ ಅವರು ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದರು.
ಈ ಕಾರಣದಿಂದ ಶುಕ್ರವಾರ ರಾತ್ರಿ ತಮಿಳುನಾಡು ಪೊಲೀಸರು ಸೂರ್ಯ ಅವರ ಮನೆಗೆ ತೆರಳಿ ಅವರನ್ನು ಬಂಧನಕ್ಕೊಳಪಡಿಸಿದ್ದಾರೆ.
ಸೂರ್ಯ ಅವರ ಬಂಧನಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ತಮಿಳುನಾಡು ಬಿಜೆಪಿ ಮುಖಂಡ ಕೆ.ಅಣ್ಣಾಮಲೈ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು ಕೂಡಲೆ ಸೂರ್ಯ ಅವರನ್ನು ಬಿಡುಗಡೆ ಮಾಡುವಂತೆ ಸರಕಾರಕ್ಕೆ ಒತ್ತಾಯಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ