ಅಪ್ಪ ಮುಖ್ಯಮಂತ್ರಿ, ಮಗ ಉಪಮುಖ್ಯಮಂತ್ರಿ
ಪ್ರಗತಿವಾಹಿನಿ ಸುದ್ದಿ: ಎಂ.ಕೆ.ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರದ ಸಚಿವ ಸಂಪುಟ ಪುನಾರಚನೆಯಾಗಿದ್ದು, ಸಿಎಂ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ಮತ್ತೆ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಡಿಸಿಎಂ ಉಡಯನಿಧಿ ಅವರಿಗೆ ಯುವ ಕಲ್ಯಾಣ ಹಾಗೂ ಕ್ರೀಡಾ ಅಭಿವೃದ್ದಿ ಯೋಜನೆ ಮತ್ತು ಅಭಿವೃದ್ಧಿ ಖಾತೆಯನ್ನೂ ನೀಡುವಂತೆ ಸಿಎಂ ಎಂ.ಕೆ.ಸ್ಟಾಲಿನ್ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.
ಇಂದು ಮಧ್ಯಾಹ್ನ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಉದಯನಿಧಿ ಸ್ಟಾಲಿನ್ ತಮಿಳುನಾಡು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಇನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 15 ತಿಂಗಳ ಜೈಲುವಾಸ ಅನುಭವಿಸಿದ್ದ ಡಿಎಂಕೆ ನಾಯಕ ಸೇಂಥಿಲ್ ಬಾಲಾಜಿ ಸಚಿವರಾಗಿ ಮತ್ತೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಉನ್ನತ ಶಿಕ್ಷಣ ಸಚಿವರಾಗಿ ಗೋವಿ ಚೆಜಿಯಾನ್, ಎಂ.ಎಸ್.ನಾಸರ್ ಅಲ್ಪಸಂಖ್ಯಾತ ಖಾತೆ ಸಚಿವರಾಗಿ, ಆರ್.ರಾಜೇಂದ್ರನ್ ಪ್ರವಾಸೋದ್ಯಮ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ