Kannada NewsKarnataka NewsLatest

*ಡೇ ಕೇರ್ ಸೆಂಟರ್ ನಲ್ಲಿ ಮಕ್ಕಳ ಮೇಲೆ ದೌರ್ಜನ್ಯ: ಪ್ರಮುಖ ಆರೋಪಿ ಸೇರಿ ಇಬ್ಬರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಬೇಬಿ ಡೇ ಕೇರ್ ಸೆಂಟರ್‌ನಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಲೂರಿನ ಹೆಚ್‌ಎಎಲ್‌ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಂಗಳೂರಿನ ಪ್ರತಿಷ್ಠಿತ ಬ್ರೂಕ್​ಫೀಲ್ಡ್​​ನಲ್ಲಿರುವ ಸೊಸೈಟಿಯಲ್ಲಿನ ಬೇಬಿ ಕೇರ್ ಸೆಂಟರ್ ನಲ್ಲಿ ಸಿವ್ಬ್ಬಂದಿಗಳು ಮಕ್ಕಳ ಮೇಲೆ ದೌರ್ಜನ್ಯ ನಡೆಸುತ್ತಿರುವ ವಿಡಿಯೋ ವೈರಲ್ ಆಗಿತ್ತು. ಪ್ರಕರಣದ ತನಿಖೆ ಚುರುಕುಗೊಳಿಸಿದ ಪೊಲೀಸರು ಪ್ರಮುಖ ಆರೋಪಿ ವಿಜಯಲಕ್ಷ್ಮೀ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ.

Home add -Advt

ಬಂಧಿತರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಡೇ ಕೇರ್‌ನಲ್ಲಿ ಮಕ್ಕಳ ಮೇಲೆ ನಡೆದಿರುವ ಹಲ್ಲೆಯ ಸಿಸಿಟಿವಿ ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ವಿಡಿಯೋದಲ್ಲಿದ್ದ ಮೂವರು ಸಿಬ್ಬಂದಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಾಗಿದ್ದು, ತನಿಖೆ ವೇಳೆ ನಮಗೇನೂ ಗೊತ್ತಿಲ್ಲ ಎಂದು ಆರೋಪಿಗಳು ಉಡಾಫೆಯ ಉತ್ತರ ನೀಡಿದ್ದರು ಎನ್ನಲಾಗಿದೆ. ಆದರೆ, ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಜುವೆನೈಲ್ ಜಸ್ಟೀಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ನಿನ್ನೆ ಮೂವರು ಪೋಷಕರಿಂದಲೂ ಪೊಲೀಸರು ದೂರಿಗೆ ಪೂರಕವಾದ ಮಾಹಿತಿ ಹಾಗೂ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಘಟನೆ ನಡೆದ ಸಮಯದಲ್ಲಿ ಇನ್ನುಳಿದ ಸಿಬ್ಬಂದಿ ಸ್ಥಳದಲ್ಲಿದ್ದರಾ ಮತ್ತು ಅವರ ಪಾತ್ರವೇನು ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ.

Related Articles

Back to top button