
ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಎರಡು ದಿನಗಳ ಹಿಂದಷ್ಟೇ ನಡೆದಿದ್ದ ಪಟಾಕಿ ದುರಂತದಲ್ಲಿ 14 ಜನರು ಸಜೀವ ದಹನಗೊಂಡಿದ್ದರು. ಈ ಘಟನೆ ಬೆನ್ನಲ್ಲೇ ಸಾಲು ಸಾಲು ಬೆಂಕಿ ದುರಂತಗಳು ಸಂಭವಿಸುತ್ತಿವೆ. ಇದೀಗ ತಮಿಳುನಾಡಿನಲ್ಲಿ ಪಟಾಕಿ ತಯಾರಿಕಾ ಘಟಕ ಸ್ಫೋಟಗೊಂದ ಪರಿಣಾಮ 10 ಜನರು ಸಾವನ್ನಪ್ಪಿದ್ದಾರೆ.
ತಮಿಳುನಾಡಿನ ಅರಿಯಲೂರು ಜಿಲ್ಲೆಯ ವೆಟ್ರಿಯೂರ್ ವೀರಗಾಲೂರಿನಲ್ಲಿ ಖಾಸಗಿ ಪಟಾಕಿ ತಯಾರಿಕಾ ಘಟಕದಲ್ಲಿ ಏಕಾಏಕಿ ಸ್ಫೋಟ ಸಂಭವಿಸಿದ್ದು, ಘಟಕದಲ್ಲಿ ಕೆಲಸ ಮಾಡುತ್ತಿದ್ದ 10 ಜನರು ಸಾವನ್ನಪ್ಪಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಂದು ಬೆಳಿಗ್ಗೆ 9:30ರ ಸುಮಾರಿಗೆ ಈ ದುರಂತ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕ ವ್ಯಾಪಿಸಿದ್ದು, ಮುಗಿಲೆತರಕ್ಕೆ ದಟ್ಟ ಹೊಗೆ ಆವರಿಸಿದೆ. ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿದ್ದಾರೆ.