Latest

ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ; 11 ಜನ ಸಜೀವ ದಹನ

ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 11 ಜನರು ಸಜೀವ ದಹನಗೊಂಡು 22ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತಮಿಳುನಾಡಿದ ವಿರುಧು ನಗರದಲ್ಲಿ ನಡೆದಿದೆ.

ಪಟಾಕಿ ಕಾರ್ಖಾನೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಸ್ಪೋಟ ಸಂಭವಿಸಿದೆ. ದುರಂತದಲ್ಲಿ 11 ಜನರು ಸಾವನ್ನಪ್ಪಿದ್ದು, ಇವರಲ್ಲಿ 9 ಮೃತದೇಹಗಳನ್ನು ಹೊರತೆಗೆಯಲಾಗಿದೆ.

ಸ್ಥಳಕ್ಕೆ ಮೂರು ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ. 30 ರಕ್ಷಣಾ ಸಿಬ್ಬಂದಿ ಹಾಗೂ ಐವರು ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button