Latest

ಖ್ಯಾತ ನಟಿ ವಿಜೆ ಚಿತ್ರಾ ಆತ್ಮಹತ್ಯೆ

ಪ್ರಗತಿವಾಹಿನಿ ಸುದ್ದಿ; ಚೆನ್ನೈ: ತಮಿಳು ಧಾರಾವಾಹಿ ಖ್ಯಾತ ನಟಿ ವಿಜೆ ಚಿತ್ರಾ ಆತ್ಮಹತ್ಯೆಗೆ ಶರಣಾಗಿದ್ದು, ಅಭಿಮಾನಿಗಳಿಗೆ ಆಘಾತವನ್ನುಂಟುಮಾಡಿದೆ.

28 ವರ್ಷದ ವಿಜೆ ಚಿತ್ರಾ ಧಾರಾವಾಹಿ ಚಿತ್ರೀಕರಣ ಮುಗಿಸಿ ಬಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಿತ್ರಾ ಅವರ ಮೃತದೇಹ ನಜರೆತ್ ಪೆಟ್ಟೈನ ಪಂಚತಾರಾ ಹೋಟೆಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ತಮಿಳುನ ಜನಪ್ರಿಯ ಧಾರಾವಾಹಿ ಪಾಂಡಿಯನ್ ಸ್ಟೋರ್ಸ್ ನಲ್ಲಿ ಮುಲ್ಲೈ ಪಾತ್ರದಲ್ಲಿ ನಟಿಸಿ ಮನೆಮಾತಾಗಿದ್ದರು. ಇವಿಪಿ ಫಿಲ್ಮ್ ಸಿಟಿಯಲ್ಲಿ ಶೂಟಿಂಗ್ ಮುಗಿಸಿ ಬಂದ ಚಿತ್ರಾ ಮುಂಜಾನೆ 2:30ರ ಸುಮಾರಿಗೆ ಹೋಟೆಲ್ ಗೆ ಮರಳಿದ್ದರು. ಹೋಟೆಲ್ ನಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕೆಲ ತಿಂಗಳ ಹಿಂದೆ ಉದ್ಯಮಿ ಹೇಮಂತ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ನಟಿ ಚಿತ್ರಾ ಆತ್ಮಹತ್ಯೆಗೆ ಖಿನ್ನತೆಯೇ ಕಾರಣ ಎನ್ನಲಾಗಿದೆ.

Related Articles

Back to top button