Latest
ಮತ್ತೋರ್ವ ಸಚಿವ ಕೊರೊನಾ ಸೋಂಕಿಗೆ ಬಲಿ

ಪ್ರಗತಿವಾಹಿನಿ ಸುದ್ದಿ; ಚೆನ್ನೈ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ತಮಿಳುನಾಡು ಕೃಷಿ ಸಚಿವ ಆರ್.ದೊರೈಕಣ್ಣು ಅವರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.
ಸಚಿವ ದೊರೈಕಣ್ಣು, ಕಳೆದ ಕೆಲ ದಿನಗಳಿಂದ ಕೊರೊನಾ ಸೋಂಕಿನಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ತಡ ರಾತ್ರಿ ಕಾವೇರಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಅ.13ರರಂದು ದೊರೈಕಣ್ಣು ಅವರನ್ನು ಕಾವೇರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಸಚಿವರು ನ್ಯುಮೋನಿಯಾ ಹಾಗೂ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ ಎಂದು ಡಾ.ಅರವಿಂದ ಸೆಲ್ವರಾಜ್ ತಿಳಿಸಿದ್ದಾರೆ. ಕೃಷಿ ಸಚಿವ ದೊರೈಕಣ್ಣು ನಿಧನಕ್ಕೆ ತಮಿಳುನಾಡು ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.




