
ಪ್ರಗತಿವಾಹಿನಿ ಸುದ್ದಿ: ರಸ್ತೆಬದಿ ನಿಂತಿದ್ದ ಕಾರಿನಲ್ಲಿ ಒಂದೇ ಕುಟುಂಬದ ಐವರು ಶವವಾಗಿ ಪತ್ತೆಯಾಗಿರುವ ಘಟನೆ ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯ ಹೆದ್ದಾರಿಯಲ್ಲಿ ನಡೆದಿದೆ.
ವಾಚ್ ಮೆನ್ ಒಬ್ಬರು ಕಾರನ್ನು ಪರಿಶೀಲಿಸಿದಾಗ ಕಾರಿನಲ್ಲಿ ಐವರು ಶವಾಗಿರುವುಇದು ಕಂಡು ಬಂದಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಿರುಚ್ಚಿ-ಮದುರೈ ಹೆದ್ದಾರಿಯ ನವಸಮುತಿರಂ ಬಳಿ ಈ ಘಟನೆ ನಡೆದಿದೆ.
ಮೃತರು ಸೇಲಂ ಮೂಲದ ಮಣಿಗಂದನ್, ಪತ್ನಿ ನಿತ್ಯಾ ಹಾಗೂ ಕುಟುಂಬ ಸದಸ್ಯರು ಎಂದು ಗುರುತಿಸಲಾಗಿದೆ. ಆದರೆ ಕುಟುಂಬದವರು ಪುದುಕೊಟ್ಟೈಗೆ ಯಾಕೆ ಬಂದಿದ್ದರು ಎಂಬುದು ತಿಳಿದುಬಂದಿಲ್ಲ. ವ್ಯಾಪಾರದಲ್ಲಿ ನಷ್ಟವುಂಟಾಗಿ ಕುಟುಂಬ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕಾಗಮಿಸಿರುವ ಪೊಲೀಸರು ತನಿಖೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ