ಪ್ರಗತಿವಾಹಿನಿ ಸುದ್ದಿ; ಚೆನ್ನೈ: ತಮಿಳುನಾಡು ಬಿಜೆಪಿ ಕಚೇರಿ ಮೇಲೆ ಅಪರಿಚಿತ ವ್ಯಕ್ತಿಯೋರ್ವ ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ
ನಿನ್ನೆ ತಡರಾತ್ರಿ 1:30ರ ಸುಮಾರಿಗೆ ಅಪರಿಚಿತ ವ್ಯಕ್ತಿಯೋರ್ವ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆದಿದ್ದು, ಘಟನೆ ಹಿಂದೆ ಡಿಎಂಕೆ ಪಾತ್ರವಿದೆ ಎಂದು ಬಿಜೆಪಿ ಆರೋಪಿಸಿದೆ.
ಈ ಘಟನೆಯನ್ನು ನಾವು ಖಂಡಿಸುತ್ತೇವೆ. ಬಿಜೆಪಿ ಕಾರ್ಯಕರ್ತರು ಇಂತಹ ವಿಷಯಗಳಿಗೆ ಹೆದರಲ್ಲ, ಈ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಬಿಜೆಪಿ ನಾಯಕ ಕರಾಟೆ ತ್ಯಾಗರಾಜ್ ತಿಳಿಸಿದ್ದಾರೆ.
ಈ ನಡುವೆ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ ಪ್ರಕರಣವನ್ನು ಎನ್ ಐ ಎ (ರಾಷ್ಟ್ರೀಯ ತನಿಖಾ ಸಂಸ್ಥೆ) ತನಿಖೆಗೆ ಒಪ್ಪಿಸುತ್ತೇವೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದ್ದು, ಇದಕ್ಕೆ ಎನ್ ಐಎ ತನಿಖೆಯೊಂದೇ ಪರಿಹಾರ ಎಂದು ತಮಿಳುನಾಡು ಬಿಜೆಪಿ ಘಟಕದ ಮುಖ್ಯಸ್ಥ ಅಣ್ಣಾಮಲೈ ತಿಳಿಸಿದ್ದಾರೆ.
ಬೆಳಗಾವಿ, ಹಾವೇರಿ, ಧಾರವಾಡಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಭೇಟಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ