
ಪ್ರಗತಿವಾಹಿನಿ ಸುದ್ದಿ; ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಭರ್ಜರಿ ಗೆಲುವಿನತ್ತ ಮುನ್ನುಗ್ಗುತ್ತಿದ್ದು, ಎಂ.ಕೆ.ಸ್ಟಾಲಿನ್ ಮುಖ್ಯಮಂತ್ರಿಯಾಗಿ ಪಟ್ಟಕ್ಕೇರುವುದು ಬಹುತೇಕ ಖಚಿತವಾಗಿದೆ.
ಮೇ 6ರಂದು ತಮಿಳುನಾಡಿನಲ್ಲಿ ಹೊಸ ಸರ್ಕಾರ ಅಸ್ಥಿತ್ವಕ್ಕೆ ಬರಲಿದ್ದು, ದಶಕದ ಬಳಿಕ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಡಿಎಂಕೆ ಪ್ರಮಾಣವಚನಕ್ಕೆ ಸಿದ್ಧತೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಕಾರ್ಯಕರ್ತರಲ್ಲಿ ಸಂತಸ ಮುಗಿಲುಮುಟ್ಟಿದೆ. ಸಂಭ್ರಮಾಚರಣೆ ಮಾದದಂತೆ ಚುನಾವಣಾ ಆಯೋಗ ಆದೇಶ ಹೊರಡಿಸಿದ್ದರೂ, ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಸಂಭ್ರಮಾಚರಣೆ ನಡೆಸಿದ್ದಾರೆ.
ತಮಿಳುನಾಡಿನ 234 ಕ್ಷೇತ್ರಗಳಲ್ಲಿ ಡಿಎಂಕೆ 142 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಎಐಡಿಎಂಕೆ 87 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. 20 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಬಿಜೆಪಿ ಕೇವಲ 1 ಕ್ಷೇತ್ರ ರಾಜ್ಯಾಧ್ಯಕ್ಷ ಮುರುಗನ್ ಕ್ಷೇತ್ರದಲ್ಲಿ ಮಾತ್ರ ಮುನ್ನಡೆಯಲ್ಲಿದೆ.
ಕಾರ್ಯಕರ್ತರ ಹೋರಾಟ, ಪರಿಶ್ರಮ ವ್ಯರ್ಥವಾಗಲು ಬಿಡುವುದಿಲ್ಲ; ಬಿ.ವೈ.ವಿಜಯೇಂದ್ರ