Latest

ವಂಚನೆ ಪ್ರಕರಣ; ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿ ಮಾಜಿ ಸಚಿವರನ್ನು ಬಂಧಿಸಿದ ಪೊಲೀಸರು

ಪ್ರಗತಿವಾಹಿನಿ ಸುದ್ದಿ; ಚೆನ್ನೈ: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಮಾಜಿ ಸಚಿವರೊಬ್ಬರನ್ನು ಹಾಸನದಲ್ಲಿ ಪೊಲೀಸರು ಸಿನಿಮೀಯ ರೀತಿ ಚೇಸ್ ಮಾಡಿ ಬಂಧಿಸಿರುವ ಘಟನೆ ನಡೆದಿದೆ.

ಎಐಎಡಿಎಂಕೆ ಪಕ್ಷದ ಮಾಜಿ ಸಚಿವ ರಾಜೇಂದ್ರ ಬಾಲಾಜಿ ಬಂಧಿತ ಆರೋಪಿ. ಹಾಸನದ ಬಳಿ ವಾರ್ತಾ ಇಲಾಖೆ ಸಮೀಪ ಕಾರಿನಲ್ಲಿ ಹೋಗುತ್ತಿದ್ದ ಮಾಜಿ ಸಚಿವರನ್ನು ಅಡ್ಡಗಟ್ಟಿ ತಮಿಳುನಾಡು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಜೇಂದ್ರ ಬಾಲಾಜಿ ಹಲವರಿಗೆ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಹೇಳಿ ಮೂರು ಕೋಟಿರೂಪಾಯಿ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಚೆನ್ನೈನ ವಿವಿಧ ಠಾಣೆಗಳಲ್ಲಿ ಆರಕ್ಕೂ ಹೆಚ್ಚು ಪ್ರಕರಣಗಳು ಬಾಲಾಜಿ ವಿರುದ್ಧ ದಾಖಲಾಗಿತ್ತು. ಮದ್ರಾಸ್ ಹೈಕೋರ್ಟ್ ಇತ್ತೀಚೆಗೆ ಮಾಜಿ ಸಚಿವ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿತ್ತು. ಇದರ ಬೆನ್ನಲ್ಲೇ ಮಾಜಿ ಸಚಿವರು ಹಾಸದ ಬಳಿ ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಪೊಲೀಸರು ಹಾಸನಕ್ಕೆ ಬಂದು ಶೋಧ ನಡೆಸಿದ್ದರು. ಕೊನೆಗೂ ಮಾಜಿ ಸಚಿವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Home add -Advt

Related Articles

Back to top button