
ಪ್ರಗತಿವಾಹಿನಿ ಸುದ್ದಿ: ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ತಮಿಳುನಾಡಿನ ತೂತುಕುಡಿಯಲ್ಲಿ ನಡೆದಿದೆ.
ಮುತ್ತುಕಣ್ಣನ್ (21), ವಿಜಯ್ (25) ಮೃತ ದುರ್ದೈವಿಗಳು. ಸೆಲ್ವಂ, ಪ್ರಶಾಂತ್, ಸೆಂಧುರ್ಕನಿ, ಮುತ್ತುಮರಿ ಎಂಬುವವರು ಗಂಭೀರವಾಗಿ ಗಾಯಗೊಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಟಾಕಿ ಕಾರ್ಖಾನೆ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ತಮಿಳುನಾಡು ಸರ್ಕಾರ ತಲಾ 3 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ