LatestUncategorized

*ಭಾರಿ ಮಳೆ; ತಮಿಳುನಾಡಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ*

ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಬಿರುಗಾಳಿ ಸಹಿತ ಭಾರಿ ಮಳೆ ಹಿನ್ನೆಲೆಯಲ್ಲಿ ತಮಿಳುನಾಡಿನ 6 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ವೆಲ್ಲೂರು, ರಾಣಿಪೇಟ್, ಚೆಂಗಲ್ ಪೇಟ್ ಜಿಲ್ಲೆಗಳಲ್ಲಿ ಮುಂಜಾಗೃತಾ ಕ್ರಮವಾಗಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಇನ್ನು ತಿರುಪತ್ತೂರ್, ತಿರುವಣ್ಣಮಲೈ, ವಿಲ್ಲುಪುರಂ, ಕಡಲೂರು, ಕಲ್ಲಕುರುಚಿ ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗುತ್ತಿದೆ. ತಮಿಳುನಾಡಿನಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಚೆನ್ನೈಗೆ ಆಗಮಿಸುತ್ತಿದ್ದ ಅಂತರಾಷ್ಟ್ರೀಯ ವಿಮಾನಗಳನ್ನು ಬೆಂಗಳೂರಿಗೆ ತಿರುಗಿಸಲಾಗಿದೆ. ಅಲ್ಲದೇ ಚೆನ್ನೈನಿಂದ ಹೊರಡಬೇಕಿದ್ದ 12ಕ್ಕೂ ಹೆಚ್ಚು ಅಂತರಾಷ್ಟ್ರೀಯ ವಿಮಾನ ನಿರ್ಗಮನ ಕೂಡ ವಿಳಂಬವಾಗಿದೆ.


Home add -Advt

Related Articles

Back to top button