Kannada NewsLatestNationalPolitics

*ತಮಿಳುನಾಡು ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ಪ್ರಮಾಣವಚನ ಸ್ವೀಕಾರ*

ಪ್ರಗತಿವಾಹಿನಿ ಸುದ್ದಿ: ಇಂದಿನಿಂದ ತಮಿಳುನಾಡಿನಲ್ಲಿ ಹೊಸ ಯುಗಾರಂಭವಾಗಿದೆ. ನಟ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ನಾಯಕ ದಳಪತಿ ವಿಜಯ್ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಚೆನ್ನೈನ ನೆಹರು ಕ್ರೀಡಾಂಗಣದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್, ನೂತನ ಮುಖ್ಯಮಂತ್ರಿ ವಿಜಯ್ ಅವರಿಗೆ ಪ್ರಮಾಣವಚನ ಬೋಧಿಸಿದರು. ತಮಿಳುನಾಡಿನ 24ನೇ ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಪ್ರಮಾಣವಚನ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ವಿಜಯ್ ಅವರ ತಂದೆ-ತಾಯಿ ಕುಟುಂಬದವರು, ನಟಿ ತ್ರಿಷಾ ಕೃಷ್ಣನ್, ಅಪಾರ ಟಿವಿಕೆ ಕಾರ್ಯಕರ್ತರು, ವಿಜಯ್ ಅವರ ಅಪಾರ ಅಭಿಮಾನಿಗಳು ನೆಹರು ಮೈದಾನದಲ್ಲಿ ಕಿಕ್ಕಿರಿದು ತುಂಬಿದ್ದರು.

Home add -Advt

ಇದೇ ವೇಳೆ ಕೆಲ ನೂತನ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

Related Articles

Back to top button