Karnataka NewsLatestNationalPolitics

*ಸರ್ಕಾರ ರಚನೆಗೆ ಟಿವಿಕೆ ಕಸರತ್ತು: 2ನೇ ಬಾರಿ ರಾಜ್ಯಪಾಲರನ್ನು ಭೇಟಿಯಾದ ನಟ ವಿಜಯ್*

ಪ್ರಗತಿವಾಹಿನಿ ಸುದ್ದಿ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದರೂ ಅಗತ್ಯ ಸಂಖ್ಯಾಬಲದ ಕೊರತೆ ಇರುವ ನಟ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷ ಸರ್ಕಾರ ರಚನೆಗಾಗಿ ಕಸರತ್ತು ನಡೆಸುತ್ತಿದೆ.

ತಮಿಳುನಾಡಿನಲ್ಲಿ ಸರ್ಕಾರ ರಚನೆಯಾಗಲು 118 ಸ್ಥಾನಗಳ ಬಹುಮತ ಬೇಕಾಗಿದೆ. ಆದರೆ, ಟಿವಿಕೆ ಚುನಾವಣೆಯಲ್ಲಿ ಗೆದ್ದಿರುವುದು 108 ಸ್ಥಾನಗಳನ್ನು. ಹೀಗಾಗಿ, ಸರ್ಕಾರ ರಚಿಸಲು ಇನ್ನೂ 10 ಸ್ಥಾನಗಳು ಬೇಕಾಗಿದ್ದರಿಂದ ವಿಜಯ್ ಬೇರೆ ಪಕ್ಷಗಳ ಬೆಂಬಲ ಕೋರಿದ್ದಾರೆ. ಕಾಂಗ್ರೆಸ್ ಟಿವಿಕೆಗೆ ಪಕ್ಷಕ್ಕೆ ಬೆಂಬಲ ಘೋಷಿಸಿದೆ. ಆದರೆ ತಮಿಳುನಾಡು ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿರುವುದು ೫ ಸ್ಥಾನಗಳನ್ನು ಮಾತ್ರ ಹಾಗಾಗಿ ಟಿವಿಕೆಗೆ ಇನ್ನೂ ೫ ಶಾಸಕರ ಕೊರತೆ ಎದುರಾಗಿದೆ.

Home add -Advt

ಅತಿದೊಡ್ಡ ಪಕ್ಷವಾಗಿ ಟಿವಿಕೆ ಹೊರಹೊಮ್ಮಿರುವ ಹಿನ್ನೆಲೆಯಲ್ಲಿ ವಿಜಯ್ ನಿನ್ನೆಯೇ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಚೆನ್ನೈನ ನೆಹರು ಕ್ರೀಡಾಂಗಣದಲ್ಲಿ ವಿಜಯ್ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕಾರಕ್ಕೆ ಸಿದ್ಧತೆ ನಡೆದಿತ್ತು. ಆದರೆ ರಾಜ್ಯಪಾಲರು ಬಹುಮತ ಸಾಬೀತು ಪಡಿಸಲು ಸೂಚಿಸಿದ್ದರಿಂದ ಪ್ರಮಾಣವಚನ ಕಾರ್ಯಕ್ರಮ ಮುಂದೂಡಲಾಗಿದೆ.

ಈ ಬೆಳವಣಿಗೆ ಬೆನ್ನಲ್ಲೇ ನಟ ವಿಜಯ್ ಇಂದು ಲೋಕಭವನಕ್ಕೆ ತೆರಳಿ ಮತ್ತೆ ರಾಜ್ಯಪಾಲರನ್ನು ಭೇಟಿಯಾಗಿ 112 ಶಾಸಕರ ಬೆಂಬಲದ ಪತ್ರ ಸಲ್ಲಿಸಿದ್ದಾರೆ. ಸರ್ಕಾರ ರಚನೆಗೆ ಅವಕಾಶ ನೀಡಿ, ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವುದಾಗಿ ಕೋರಿದ್ದಾರೆ. ಇಅದಕ್ಕೆ ಒಪ್ಪದ ರಾಜ್ಯಪಾಲರು ಮೊದಲು 118 ಶಾಸಕರ ಬೆಣ್ಬಲದೊಂದಿಗೆ ಬನ್ನಿ ಬಳಿಕ ಸರ್ಕಾರ ರಚನೆ ಮಾಡಿ ಎಂದು 42 ಗಂಟೆಗಳ ಕಾಲಾವಕಾಶ ನೀಡಿದ್ದಾರೆ. ರಾಜ್ಯಪಾಲರ ಸೂಚನೆ ಹಿನ್ನೆಲೆಯಲಿ ವಿಜಯ್ ಮುಂದಿನ ನಡೆ ಏನು? ಎಂಬುದು ಕುತೂಹಲ ಕೆರಳಿಸಿದೆ.

Related Articles

Back to top button