ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಬೆಳಕಿನ ಹಬ್ಬ ದೀಪಾವಳಿ ದಿನದಂದೇ ತಮುಳುನಾಡು ಬಟ್ಟೆ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ.
ತಮಿಳುನಾಡಿನ ಮಧುರೈ ಜಿಲ್ಲೆಯ ನವಬತ್ಕನ ಪ್ರದೇಶದಲ್ಲಿ ಬಟ್ಟೆ ಅಂಗಡಿಗೆ ಬೆಂಕಿ ಬಿದ್ದಿದೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಮುಂದಾಗಿದ್ದಾರೆ. ಈ ವೇಳೆ ಅಗ್ನಿಶಾಮಗ ಸಿಬ್ಬಂದಿಗಳ ಮೇಲೆ ಅಂಗಡಿಯ ಕಟ್ಟಡ ಏಕಾಏಕಿ ಕುಸಿದು ಬಿದ್ದಿದೆ. ಪರಿಣಾಮ ಇಬ್ಬರು ಅಗ್ನಿಶಾಮಕ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ