Kannada NewsNational

*ಭೀಕರ ಅಪಘಾತ: ಪಾದಚಾರಿಗಳ ಮೇಲೆ ಹರಿದ ಲಾರಿ; 6 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಭೀಕರ ಅಪಘಾತದಲ್ಲಿ 6 ಜನ ಪಾದಚಾರಿಗಳು ಸಾವನ್ನಪ್ಪಿರುವ ಘೋರ ಘಟನೆ ತಮಿಳುನಾಡಿನ ತಿರುಚ್ಚಿಯಲ್ಲಿ ನಡೆದಿದೆ.

ವೇಗವಾಗಿ ಬಂದ ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಾದಚಾರಿಗಳ ಮೇಲೆ ಹರಿದಿದೆ. 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 9 ಜನರು ಗಾಯಗೊಂಡಿದ್ದು, ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ.

Home add -Advt

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ಕಳೆದುಕೊಂಡು ಮೂರು ದ್ವಿಚಕ್ರವಾಹನಗಳಿಗೆ ಡಿಕ್ಕಿ ಹೊಡೆದಿದೆ. ಬಳಿಕ ರಸ್ತೆಯಲ್ಲಿ ನಡೆದು ಹೋಗುತ್ತಿರುವವರ ಮೇಲೆಯೇ ಹರಿದು ಹೋಗಿದೆ.

ಘಟನೆ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ. ಘಟನೆ ಖಂಡಿಸಿ ಗ್ರಾಮಸ್ಥರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ.

Related Articles

Back to top button