Latest
ಟ್ಯಾಂಕರ್- ಕಾರು ಮುಖಾಮುಖಿ ಡಿಕ್ಕಿ; ನಾಲ್ವರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಟ್ಯಾಂಕರ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆ ಕೋಟನೂರು ಬಳಿ ಸಂಭವಿಸಿದೆ.
ಕಲಬುರ್ಗಿಯಿಂದ ಜೇವರ್ಗಿ ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಹಾಗೂ ಜೇವರ್ಗಿಯಿಂದ ಕಲಬುರ್ಗಿ ಕದೆಗೆ ತೆರಳುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ರಾಹುಲ್ (25), ಖಾಸಿಂ( 26), ಉಲ್ಲಾಸ್ (26) ಮೃತರು, ಮೃತಪಟ್ಟಿರುವ ಇನ್ನೋರ್ವನ ಗುರುತು ಪತ್ತೆಯಾಗಿಲ್ಲ. ಗಾಯಾಳುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.




