
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ತಾಲೂಕಿನ ಹಿರೇಬಾಗೆವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಸುವರ್ಣಸೌಧದ ಎದುರು ತೈಲ ಟ್ಯಾಂಕರ್ ಪಲ್ಟಿಯಾಗಿ ಲಾರಿಯಲ್ಲಿದ್ದ ಲಕ್ಷಾಂತರ ಮೌಲ್ಯದ ತೈಲ ಮಣ್ಣು ಪಾಲಾಗಿದೆ.
ತಾಲೂಕಿನ ಹಲಗಾ ಬಳಿಯ ರಾಷ್ಟ್ರೀಯ ಹೆದ್ದಾರಿಯ ಮೇಲೆ ಘಟನೆ ಸಂಭವಿಸಿದೆ. ಲಾರಿಯಲಿದ್ದ ಪೆಟ್ರೋಲ್ ನದಿಯಂತೆ ಹರಿದಿದೆ. ಸ್ಥಳೀಯರು ನೋಡಿ ದಂಗಾಗಿದ್ದಾರೆ.ಧಾರವಾಡ ಕಡೆಯಿಂದ ಬೆಳಗಾವಿಗೆ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಘಟನೆ ನಡೆದಿದೆ ಎನ್ನಲಾಗಿದೆ.
ಟ್ಯಾಂಕರ್ ವಾಹನ ಪಲ್ಟಿಯಾಗುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದಾವಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಹೆದ್ದಾರಿಯನ್ನು ಬಂದ್ ಮಾಡಿ ಕ್ರೇನ್ ಮೂಲಕ ಲಾರಿಯನ್ನು ಮೇಲೆತ್ತಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ