
ಪ್ರಗತಿವಾಹಿನಿ ಸುದ್ದಿ: ಹೊಸೂರು ಬಳಿಯ ಟಾಟಾ ಎಲೆಕ್ಟ್ರಾನಿಕ್ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ.
ತಮಿಳುನಾಡಿನ ಹೊಸೂರು ಬಳಿಯ ಟಾಟಾ ಕಂಪನಿಯ ಎಲೆಕ್ಟ್ರಾನಿಕ್ ಸೆಲ್ ಫೋನ್ ತಯಾರಿಕಾ ಘಟಕದ ರಾಸಾಯಿನಿಕ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ವ್ಯಾಪಿಸಿದೆ.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸಿಬ್ಬಂದಿಗಳು, ಕಾರ್ಮಿಕರು ಹೊರಗೋಡಿಬಂದು ಜೀವ ಉಳಿಸಿಕೊಂಡಿದ್ದಾರೆ. ಘಟನ ಅಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದ್ದು, ಕೆಲ ಮಹಿಳಾ ಸಿಬ್ಬಂದಿಗಳು ಉಸಿರಾಟ ತೊಂದರೆಯಿಂದಾಗಿ ಅಸ್ವಸ್ಥರಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಸಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನ ಅಸ್ಥಳಕ್ಕೆ ಅಗ್ನಿಶಮಕ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ