
ಪ್ರಗತಿವಾಹಿನಿ ಸುದ್ದಿ; ತಿರುವನಂತಪುರಂ: ಮರಕ್ಕೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಹೊಡೆದ ಪರಿಣಾಮ ಚಾಲಕ ಮೃತಪಟ್ಟಿದ್ದು, 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಕೊಚ್ಚಿಯ ಚಕ್ಕರಪರಂಬು ಬಳಿ ನಡೆದಿದೆ.
ಅರುಣ್ ಕುಮಾರ್ ಮೃತ ಚಾಲಕ. ತಿರುವನಂತಪುರಂ ನಿವಾಸಿ. ಬಸ್ ತಿರುವನಂತಪುರಂ ನಿಂದ ಕೋಯಿಕ್ಕೋಡ್ ಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಚಾಲಕನ ನಿಯಂತ್ರಣ ತಪ್ಪಿ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬಸ್ ನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ.