*ಟ್ಯಾಟೂ ಪ್ರಿಯರಿಗೆ ಸರ್ಕಾರ ಬಿಗ್ ಶಾಕ್: ಟ್ಯಾಟೂದಿಂದಲೂ ಬರುತ್ತದೆ ಮಾರಣಾಂತಿಕ ರೋಗಗಳು!*

ಪ್ರಗತಿವಾಹಿನಿ ಸುದ್ದಿ: ಟ್ಯಾಟೂ ಪ್ರಿಯರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ದೇಶದಲ್ಲಿಯೇ ಇದೇ ಮೊದಲ ಬಾರಿಗೆ ಟ್ಯಾಟೂ ಹಾಕಿಸುಕೊಳ್ಳುವ ಪ್ರಕ್ರಿಯೆಗೆ ಕಡಿವಾಣ ಹಾಕಲು ಆರೋಗ್ಯ ಇಲಾಖೆ ಮುಂದಾಗಿದೆ.
ಟ್ಯಾಟೂವಿನಿಂದ HIV, ಸ್ಕಿನ್ ಕ್ಯಾನ್ಸರ್ ಪ್ರಮಾಣದಲ್ಲಿ ಏರಿಕೆಯಾಗಿದೆ. ಹೆಪಟೈಟಿಸ್ ಬಿ, ಹೆಪಟೈಟಿಸ್ ಸಿ, ಸ್ಟ್ಯಾಫಿಲೋಕೊಕಸ್ ನಂತಹ ಕಾಯಿಲೆಗಳು ಹೆಚ್ಚುತ್ತಿವೆ. ಇದರಿಂದಾಗಿ ಜನರ ಆರೋಗ್ಯದ ದೃಷ್ಟಿಯಿಂದ ಟ್ಯಾಟೂಗೆ ಕಡಿವಾಣ ಹಾಕಲು ರಾಜ್ಯ ಆರೋಗ್ಯ ಇಲಾಖೆ ಮುಂದಾಗಿದೆ.
ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಟ್ಯಾಟೂ ಕ್ರೇಜ್ ಹೆಚ್ಚಾಗಿದ್ದು, ರಸ್ತೆ ಬದಿಗಳಲ್ಲಿ ಎಲ್ಲೆಂದರಲ್ಲಿ ಜನರು ಟ್ಯಾಟೂ ಹಾಕಿಸಿಕೊಳ್ಳುತ್ತಿದ್ದಾರೆ. ಇದರಿಂದಾಗಿ ಹಲವರು ಸ್ಕಿನ್ ಸಮಸ್ಯೆ, ಕ್ಯಾನ್ಸರ್ ನಂತಹ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಹಲವೆಡೆಗಳಲ್ಲಿ ಒಬ್ಬರಿಗೆ ಟ್ಯಾಟೂ ಹಾಕಿದ ಸೂಜಿಯಿಂದಲೇ ಬೇರೆಯವರಿಗೆ ಟ್ಯಾಟೂ ಹಾಕುತ್ತಾರೆ. ಇದರಿಂದಾಗಿ HIVಯಂತಹ ರೋಗಗಳು, ಸ್ಕಿನ್ ಸಮಸ್ಯೆಗಳು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ ಎಂಬುದು ತಜ್ಞರ ಅಭಿಪ್ರಾಯ.
ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಟ್ಯಾಟೂ ಬಗ್ಗೆ ಮಾರ್ಗಸೂಚಿಯನ್ನು ಹೊರಡಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಿದೆ. ಗಂಭೀರ ಕಾಯಿಲೆಯಿಂದ ಬಳಲುತ್ತಿದ್ದವರು, ಚರ್ಮದ ಕಾಯಿಲೆ, ಅನಾರೋಗ್ಯದಿಂದ ಇರುವವರು ಟ್ಯಾಟೂ ಹಾಕಿಸಿಕೊಳ್ಳುವಂತಿಲ್ಲ. ಅಲ್ಲದೇ ಟ್ಯಾಟೂ ಹಾಕುವ ಪರಿಣತರಿಗೂ ಕೆಲ ನಿಯಮಗಳನ್ನು ರೂಪಿಸಲು ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ