ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ತೌಕ್ತೆ ಚಂಡಮಾರುತದ ಅಬ್ಬರಕ್ಕೆ ಗಡಿ ಜಿಲ್ಲೆ ಬೆಳಗಾವಿಯಲ್ಲಿಯೂ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟ ರದ್ದುಮಾಡಲಾಗಿದೆ.
ಪ್ರತಿಕೂಲ ಹವಾಮಾನ ಹಿನ್ನೆಲೆಯಲ್ಲಿ ಸಾಂಬ್ರಾ ವಿಮಾನನಿಲ್ದಾಣದಿಂದ ವಿಮಾನಗಳ ಹಾರಾಟ ರದ್ದು ಮಾಡಲಾಗಿದೆ. ಹೈದರಾಬಾದ್ ಹಾಗೂ ತಿರುಪತಿ ನಡುವಿನ ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ ಎಂದು ವಿಮಾನ ನಿಲ್ದಾಣ ನಿರ್ದೇಶಕ ರಾಜೇಶ್ ಕುಮಾರ್ ತಿಳಿಸಿದ್ದಾರೆ.
ಮುಂದಿನ ವಿಮಾನ ಹಾರಾಟದ ಬಗ್ಗೆ ವಾತಾವರಣ ಪರಿಶೀಲಿಸಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಸೂಚನೆ ಮೇರೆಗೆ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲೂ ಇಬ್ಬರನ್ನು ಬಲಿ ತೆಗೆದುಕೊಂಡ ಚಂಡಮಾರುತ ಮಳೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ