ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಒರಾಯನ್ ಮಾಲ್ ನ ಪಿವಿಆರ್ ಥಿಯೇಟರ್ ನಲ್ಲಿ ಕಾಶ್ಮೀರ ಫೈಲ್ಸ್ ಚಲನಚಿತ್ರವನ್ನು ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ಚಿತ್ರ ನಟ ಅನಂತನಾಗ , ಸಚಿವ ಮುನಿರತ್ನ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮೊದಲಾದವರು ಉಪಸ್ಥಿತರಿದ್ದರು.
ಈ ಕುರಿತು ಟ್ವೀಟ್ ಮಾಡಿರುವ ಬೊಮ್ಮಾಯಿ ಕಾಶ್ಮೀರ ಫೈಲ್ಸ್ ಚಿತ್ರಕ್ಕೆ ಕರ್ನಾಟಕದಲ್ಲಿ ತೆರಿಗೆ ವಿನಾಯಿಸಿ ನೀಡುವುದಾಗಿ ತಿಳಿಸಿದ್ದಾರೆ.
ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಕಳೆದ ವಾರವೇ ಕಾಶ್ಮೀರ್ ಫೈಲ್ಸ್ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಬೊಮ್ಮಾಯಿ ಅವರಲ್ಲಿ ವಿನಂತಿಸಿದ್ದರು.
ತಾಯಿಯ ಮೃತದೇಹದೊಂದಿಗೆ 4 ದಿನ ಕಳೆದ ಬಾಲಕ ; ತಾಯಿ ನಿದ್ರಿಸುತ್ತಿದ್ದಾಳೆಂದು ತಿಳಿದು ಶಾಲೆಗೆ ಹೋಗಿ ಬರುತ್ತಿದ್ದ !
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ