Karnataka NewsLatest

*ವರ್ತಕರು ಕರೆ ನೀಡಿದ್ದ ಬಂದ್ ವಾಪಸ್*

ಸಭೆ ಬಳಿಕ ಸಿಎಂ ಸುದ್ದಿಗೋಷ್ಠಿ

ಪ್ರಗತಿವಾಹಿನಿ ಸುದ್ದಿ: ಸಣ್ಣ ವ್ಯಾಪಾರಿಗಳಿಗೆ ತೆರಿಗೆ ಇಲಾಖೆಯಿಂದ ನೋಟಿಸ್ ವಿಚಾರವಾಗಿ ಸಿಡಿದೆದ್ದಿದ್ದ ವ್ಯಾಪಾರಿಗಳು ಯುಪಿಐ, ಆನ್ ಲೈನ್ ಹಣ ಪಾವತಿ ಬಂದ್ ಮಾಡಿದ್ದ ವರ್ತಕರು ನಗದು ಹಣ ಪಾವತಿಗೆ ಮಾತ್ರ ನಿರ್ಧರಿಸಿದ್ದರು. ಅಲ್ಲದೇ ಜುಲೈ 25ರಂದು ಬಂದ್ ಕರೆ ನೀಡಿದ್ದರು. ಇದೀಗ ಬಂದ್ ಕರೆ ಹಿಂಪಡೆಯಲಾಗಿದೆ.

ಗೃಹ ಕಚೇರಿ ಕೃಷ್ಣಾದಲ್ಲಿ ವರ್ತಕರ ಸಂಘಟನೆ ಹಾಗೂ ಎಫ್ ಕೆ ಸಿಸಿಐ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದ್ದ ಸಭೆಯಲ್ಲಿ ವರ್ತಕರು, ಸಣ್ಣ ವ್ಯಾಪಾರಸ್ಥರು ಜುಲೈ 25ರಂದು ಕರೆ ನೀಡಿದ್ದ ಬಂದ್ ವಾಪಸ್ ಪಡೆಯಲು ಸಮ್ಮತಿ ಸೂಚಿಸಿದ್ದಾರೆ.

Home add -Advt

ಈ ಹಿನ್ನೆಲೆಯಲ್ಲಿ ಜುಲೈ 25ರಂದು ರಾಜ್ಯಾದ್ಯಂತ ಎಂದಿನಂತೆ ಚಿನ್ನರೆ ವ್ಯಾಪಾರ, ಸಣ್ಣ ಅಂಗಡಿಗಳು ಕಾರ್ಯನಿರ್ವಹಿಸಲಿವೆ ಎಂದು ತಿಳಿದುಬಂದಿದೆ.

ಸಭೆ ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ವರ್ತಕರು ಕರೆ ನೀಡಿದ್ದ ಬಂದ್ ಕೈಬಿಟ್ಟಿದ್ದಾರೆ ಎಂದು ತಿಳಿಸಿದರು.

ಸಣ್ಣ ವ್ಯಾಣಿಜ್ಯೋದ್ಯಮಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೀಡಿರುವ ಜಿಎಸ್ಟಿ ನೊಟೀಸ್ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಹಾಗೂ ಸಭೆ ಬಳಿಕ ಮಾಧ್ಯಮ ಗೋಷ್ಠಿಯಲ್ಲಿ ಮುಖ್ಯಮಂತ್ರಿಗಳು ನೀಡಿದ ವಿವರಗಳ ಮುಖ್ಯಾಂಶಗಳು:

• ವ್ಯಾಪಾರಿಗಳನ್ನು ಪ್ರತಿನಿಧಿಸುವ ಹಲವು ಸಂಘಟನೆಗಳ ಪ್ರತಿನಿಧಿಗಳು ತಮ್ಮ ಅಹವಾಲುಗಳನ್ನು ಸಲ್ಲಿಸಿದ್ದಾರೆ.

• ʻಸಣ್ಣ ವ್ಯಾಪಾರಿಗಳಲ್ಲಿ ಜಿಎಸ್ಟಿ ನೊಟೀಸ್ ಕುರಿತು ಗೊಂದಲ ಇದೆ. ಸಾಲದ ಮೊತ್ತ ಕೂಡಾ ಇದರಲ್ಲಿ ಸೇರಿಕೊಂಡಿದೆ. ವೈಯಕ್ತಿಕ ವಹಿವಾಟು ಹಣ ಸಹ ಇದರಲ್ಲಿ ಸೇರಿದೆʼ.
• ʻಜಿಎಸ್ಟಿ ನೊಟೀಸ್ ನೀಡುವುದು ತಪ್ಪಲ್ಲ. ಆದರೆ ವ್ಯಾಪಾರಿಗಳಿಗೆ ಪರಿಹಾರ ತೆರಿಗೆ ಪಾವತಿಸಲು ಅವಕಾಶ ನೀಡಬೇಕು. ಮಧ್ಯವರ್ತಿಗಳಿಗೆ ಅವಕಾಶ ನೀಡದೆ, ವ್ಯಾಪಾರಿಗಳು ನೇರವಾಗಿ ಇಲಾಖೆ ಸಂಪರ್ಕಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕುʼ ಎಂದು ಕೆಲವು ಪ್ರತಿನಿಧಿಗಳು ಮನವಿ ಮಾಡಿದ್ದಾರೆ.
• ʻಸಣ್ಣ ವ್ಯಾಪಾರಿಗಳಿಗೆ ನೆರವಾಗುವಂತೆ ಸಹಾಯವಾಣಿ ಆರಂಭಿಸಬೇಕುʼ.
• ಜಿಎಸ್ಟಿ ಕುರಿತು ಸರಿಯಾಗಿ ಮಾಹಿತಿ ಇಲ್ಲದ ಕಾರಣ ಗೊಂದಲ ಉಂಟಾಗಿದೆ. ಜಾಗೃತಿ ಕಾರ್ಯಕ್ರಮ ಕೈಗೊಳ್ಳಬೇಕು. ಒಂದು ಬಾರಿಗೆ ಹಳೆಯ ಬಾಕಿಯನ್ನು ಮನ್ನಾ ಮಾಡಬೇಕು ಎಂದು ಮನವಿ ಸಲ್ಲಿಸಿದರು.
• ಯುಪಿಐ ಅಡಿ ರೂ. 40ಲಕ್ಷಕ್ಕೂ ಅಧಿಕ ವಹಿವಾಟು ಮಾಡಿರುವವರಿಗೆ ಮಾತ್ರ ಜಿಎಸ್ಟಿ ನೊಟೀಸ್ ನೀಡಲಾಗಿದೆ. ಆರಂಭದಲ್ಲಿ ಜಿಎಸ್ಟಿ ನೊಂದಣಿ ಮಾಡುವಂತೆ ನೋಟಿಸ್ ನೀಡಲಾಗಿತ್ತು.
• ಹಾಲು, ತರಕಾರಿ, ಮಾಂಸ, ಹಣ್ಣಿನಂತಹ ಅಗತ್ಯ ಆಹಾರ ವಸ್ತುಗಳಿಗೆ ತೆರಿಗೆ ವಿನಾಯಿತಿ ಇದ್ದು, ಅಂತಹ ವ್ಯಾಪಾರಿಗಳಿಗೆ ನೊಟೀಸ್ ಕೊಟ್ಟಿದ್ದರೂ, ಅವರಿಂದ ತೆರಿಗೆ ವಸೂಲು ಮಾಡುವುದಿಲ್ಲ. ಆದರೆ ಯಾರು ಕಾಯ್ದೆ ಪ್ರಕಾರ ತೆರಿಗೆ ಕಟ್ಟಬೇಕಾಗಿದೆಯೋ ಅವರು ಕಟ್ಟಬೇಕು.

• ನೊಟೀಸ್ ನೀಡಲಾಗಿರುವ ಹಳೆಯ ತೆರಿಗೆ ಬಾಕಿಯನ್ನು ಮನ್ನಾ ಮಾಡಲಾಗುವುದು. ಅದನ್ನು ಸರ್ಕಾರ ವಸೂಲು ಮಾಡುವುದಿಲ್ಲ. ಆದರೆ ಅವರೆಲ್ಲರೂ ಕಡ್ಡಾಯವಾಗಿ ಜಿಎಸ್ಟಿ ನೋಂದಣಿ ಮಾಡಬೇಕು ಎಂದು ಮುಖ್ಯಮಂತ್ರಿ ಅವರು ಸ್ಪಷ್ಟಪಡಿಸಿದರು.

• ಯುಪಿಐ ವಹಿವಾಟು ಕೈಬಿಟ್ಟರೆ ವಹಿವಾಟಿನ ಮೇಲೆ ಪರಿಣಾಮ ಬೀರಲಿದೆ. ರಾಜ್ಯದಲ್ಲಿ ಕೇವಲ 9ಸಾವಿರ ವ್ಯಾಪಾರಿಗಳಿಗೆ ಕಳೆದ 2-3 ವರ್ಷಗಳ ಅವಧಿಗೆ ಸಂಬಂಧಿಸಿದಂತೆ 18ಸಾವಿರ ನೊಟೀಸ್ ಜಾರಿಗೊಳಿಸಲಾಗಿದೆ.

• ವ್ಯಾಪಾರ ವಹಿವಾಟುಗಳನ್ನು ಕಾನೂನು ಬದ್ಧವಾಗಿ ಸರ್ಕಾರ ಎಲ್ಲಾ ನೆರವು ನೀಡಲಿದೆ. ತೆರಿಗೆ ಸರಿಯಾಗಿ ಪಾವತಿಸಲು ಸಹಕಾರ ನೀಡಲಿದೆ. ವ್ಯಾಪಾರಿಗಳಿಗೆ ತೊಂದರೆ ನೀಡಬೇಕೆಂಬುವುದು ಸರ್ಕಾರದ ಉದ್ದೇಶವಲ್ಲ. ಸರ್ಕಾರ ಸಣ್ಣ ವ್ಯಾಪಾರಿಗಳ ಪರವಾಗಿದೆ.

• ಜಿಎಸ್ಟಿ ತೆರಿಗೆಯನ್ನು ಕೇಂದ್ರ ಹಣಕಾಸು ಸಚಿವರ ಅಧ್ಯಕ್ಷತೆಯ ಜಿಎಸ್ಟಿ ಕೌನ್ಸಿಲ್ ನಿರ್ಧರಿಸುತ್ತದೆ. ಈ ತೆರಿಗೆ ಸಂಗ್ರಹದಲ್ಲಿ ಶೇ.50ರಷ್ಟನ್ನು ರಾಜ್ಯಕ್ಕೆ ನೀಡಲಾಗುತ್ತದೆ. ದೇಶದಲ್ಲೇ ಕರ್ನಾಟಕ ಜಿಎಸ್ಟಿ ಸಂಗ್ರಹದಲ್ಲಿ ಎರಡನೇ ಸ್ಥಾನದಲ್ಲಿದೆ.

• ಸರ್ಕಾರ ಪಾರದರ್ಶಕವಾಗಿ ಕಾರ್ಯನಿರ್ವಹಿಸಲಿದ್ದು, ಯಾರಿಗೂ ತೊಂದರೆಯಾಗದಂತೆ ಖಾತ್ರಿಪಡಿಸಲಾಗುವುದು. ವ್ಯಾಪಾರಿಗಳಿಗೆ ನೆರವು ನೀಡಲು ಈಗಲೇ ಸಹಾಯವಾಣಿ ಇದ್ದು, ಇದನ್ನು ಪರಿಣಾಮಕಾರಿಯಾಗಿಸಬೇಕು.

• ವ್ಯಾಪಾರ ವಹಿವಾಟು ಬಂದ್ಗೆ ಯಾವುದೇ ಸಂಘಟನೆಗಳು ಬೆಂಬಲ ನೀಡಿಲ್ಲ ಎಂದು ಪ್ರತಿನಿಧಿಗಳು ಸ್ಪಷ್ಟಪಡಿಸಿದ್ದಾರೆ. ಈ ಕುರಿತಾಗಿ ನಡೆಸಲು ನಿರ್ಧರಿಸಿದ್ದ ಎಲ್ಲಾ ರೀತಿಯ ಪ್ರತಿಭಟನೆಗಳನ್ನು ಕೈಬಿಡಲಾಗುವುದು ಎಂದು ಸಂಘ ಸಂಸ್ಥೆಗಳ ಪ್ರತಿನಿಧಿಗಳು ತಿಳಿಸಿದರು.

Karnataka Chief Minister Siddaramaiah Addresses GST Notice Concerns in Trade Union Meeting


Bengaluru: Karnataka Chief Minister Siddaramaiah chaired a meeting with representatives of various trade unions today to discuss concerns over GST notices issued to small traders for non-payment of taxes. The meeting addressed grievances and proposed solutions to support small businesses.
Trade union representatives, including the Federation of Karnataka Chambers of Commerce and Industry (FKCCI), raised concerns about confusion among small traders regarding GST notices, which often include loan amounts and personal transactions. They urged the government to allow traders to directly resolve issues with the Commercial Tax Department without intermediaries and to provide sufficient time to settle dues. Suggestions included launching a dedicated helpline and conducting awareness programs to clarify GST regulations. They also requested a one-time waiver of old tax arrears.
The Chief Minister clarified that notices were issued only to traders with UPI transactions exceeding Rs. 40 lakh, initially to prompt GST registration. He assured that no taxes would be collected from traders dealing in exempt goods like milk, vegetables, meat, and fruits, but those liable under the law must comply. He announced that old tax arrears would not be pursued , provided all such traders register under the GST and start paying the GST in the future.
The government emphasized its commitment to supporting small traders and ensuring lawful business operations. It will provide assistance for timely tax payments and enhance the existing helpline for better accessibility. The state, which ranks second in India for GST collection, shares 50% of the revenue with the central government, as decided by the GST Council chaired by the Union Finance Minister.
The government assured transparent operations and help the traders in every possible way legally. Trade bodies confirmed they have not supported any bandhs and agreed to withdraw planned protests following the Chief Minister’s assurances. The government reiterated its focus on empowering small traders and boosting purchasing power through various programs.

Related Articles

Back to top button