ಪ್ರಗತಿವಾಹಿನಿ ಸುದ್ದಿ, ಬೆಳಗಾವಿ -ಅಕ್ಟೋಬರ್ 5 ಮತ್ತು 6 ರಂದು ಧಾರವಾಡದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಕ್ಷೇತ್ರದಲ್ಲಿ “ಭಾರತದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ” ನ್ಯಾಶನಲ್ ಟ್ಯಾಕ್ಸ್ ಪ್ರ್ಯಾಕ್ಟೀಶನರ್ಸ್ ದಿನ ಮತ್ತು ಸಂಘದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಆಚರಿಸಲಾಗುತ್ತಿದೆ.
ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕೇಂದ್ರ ಸರ್ಕಾರದ ಸಚಿವರುಗಳಾದ ಪ್ರಹ್ಲಾದ್ ಜೋಷಿ, ಸುರೇಶ್ ಅಂಗಡಿ, ಜೊತೆಗೆ ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಇವರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
6 ರಂದು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದು, ಸಂಘದ ವೆಬ್ ಸೈಟ್, ಲೋಗೋ ಹಾಗೂ ಸಂಘದ e-journal ಗಳನ್ನು ಬಿಡುಗಡೆ ಮಾಡಲಿದ್ದಾರೆ.
ತೆರಿಗೆ ಸಲಹೆಗಾರರಿಗಾಗಿ, ಸಂಘಕ್ಕಾಗಿ ದುಡಿದ ಹಲವು ಹಿರಿಯರನ್ನು ಗೌರವಿಸುವ ಕಾರ್ಯಕ್ರಮ ಸಹ ಹಮ್ಮಿಕೊಳ್ಳಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ