Kannada NewsKarnataka NewsLatest

ಮಕ್ಕಳಲ್ಲಿ ರಾಷ್ಟ್ರಭಕ್ತಿ ಮೂಡಿಸಿ: ಶಿಕ್ಷಕರಿಗೆ ಶಂಕರಗೌಡ ಪಾಟೀಲ ಕರೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಶಿಕ್ಷಕರು ಮಕ್ಕಳಿಗೆ ರಾಷ್ಟ್ರಭಕ್ತಿ ಮೂಡಿಸುವ ಕೆಲಸ ಮಾಡಬೇಕು. ಶಾಲೆಗಳಲ್ಲಿ ಮಾಡುವ ಪಾಠ ಮಕ್ಕಳ ಮನಸ್ಸಿನಲ್ಲಿ ಅಚ್ಛಳಿಯದೇ ಉಳಿಯುತ್ತದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ ಕರೆ ನೀಡಿದ್ದಾರೆ.
71ನೇ ಗಣರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಭಾಗ್ಯನಗರ ಹಾಗೂ ಚಿದಂಬರ್ ನಗರದ ಸರ್ಕಾರಿ ಕನ್ನಡ ಶಾಲೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಅವರು ಮಾತನಾಡುತ್ತಿದ್ದರು.
ಮಕ್ಕಳ ಮನಸ್ಸು ಹಸಿ ಗೋಡೆ ಇದ್ದಂತೆ. ಅಲ್ಲಿ ನಾವು ಏನನ್ನು ಬಿತ್ತುತ್ತೇವೋ ಅದು ಅಚ್ಚಾಗಿ ಕುಳಿತುಕೊಳ್ಳುತ್ತದೆ. ಹಾಗಾಗಿ ಅವರ ಮನಸ್ಸಿನಲ್ಲಿ ಕೆಟ್ಟ ವಿಚಾರಗಳು ಹೊಗದಂತೆ ಮತ್ತು ಉತ್ತಮ ವಿಚಾರಗಳು, ರಾಷ್ಟ್ರ ಪ್ರೇಮ ಮೂಡಿಸುವಂತಹ ವಿಚಾರಗಳನ್ನು ತುಂಬಬೇಕು ಎಂದು ಅವರು ಕರೆ ನೀಡಿದರು.
ಶಾಲೆಯ ಅಭಿವೃದ್ಧಿಗಾಗಿ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದ ಅವರು, ಸರಕಾರಿ ಶಾಲೆಯನ್ನು ಖಾಸಗಿ ಶಾಲೆಗಳಂತೆ ಅಭಿವೃದ್ಧಿಪಡಿಸಬೇಕು. ಹೆಚ್ಚು ಹೆಚ್ಚು ಮಕ್ಕಳನ್ನು ಆಕರ್ಷಿಸುವ ಕೆಲಸವಾಗಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಬಹದ್ದೂರೆ, ಶಾಲೆಯ ಮುಖ್ಯೋಧ್ಯಾಯರುಗಳಾದ ರಾಜಶೇಖರ್ ನೆಗಿನಾಳ ಹಾಗೂ ಟಿ ಆರ್ ಪಾಟೀಲ್ ಹಾಗೂ ಶಿಕ್ಷಕ ವೃಂದವರು ಹಾಜರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button