
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮಾಸ್ತಮರ್ಡಿ ಶಾಲೆಯ ಶಿಕ್ಷಕ ಬಸವರಾಜ ಸುಣಗಾರ ನಿಧನರಾಗಿದ್ದಾರೆ. ಅವರಿಗೆ 57 ವರ್ಷ ವಯಸ್ಸಾಗಿತ್ತು.
ಶಿಕ್ಷಕರ ಸಂಘಟನೆಗಳಲ್ಲಿ ಸಕ್ರೀಯರಾಗಿದ್ದ ಅವರು ಅಲ್ಪಕಾಲದ ಅನಾರೋಗ್ಯದ ನಂತರ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಸಂಜೆ ನಿಧನರಾದರು. ಮೂಲತಃ ಹಣ್ಣಿಕೇರಿಯವರಾಗಿದ್ದ ಅವರಿಗೆ ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಇದ್ದಾರೆ. ಗುರುವಾರ ಬೆಳಗ್ಗೆ ಅಂತ್ಯಕ್ರಿಯೆ ನಡೆಯಲಿದೆ.