ಪ್ರಗತಿವಾಹಿನಿ ಸುದ್ದಿ; ಧಾರವಾಡ: ಪಿಎಸ್ ಐ ನೇಮಕಾತಿ ಅಕ್ರಮ, ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಕ್ರಮಗಳ ತನಿಖೆ ನಡೆದಿರುವಾಗಲೇ ಇದೀಗ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಪಟ್ಟಿಯಲ್ಲಿಯೂ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.
15 ಸಾವಿರ ಶಿಕ್ಷಕರ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟವಾಗಿದೆ. ಮೇ 2022ರಲ್ಲಿ ಸಿಇಟಿ ಪರೀಕ್ಷೆ ನಡೆದಿತ್ತು. ಆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗಿತ್ತು. ಇದೀಗ ಪ್ರಕಟಗೊಂಡಿರುವ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಸಿಇಟಿ ಪರೀಕ್ಷೆ ಬರೆಯದೇ ಇದ್ದವರ ಹೆಸರನ್ನೂ ಕೂಡ ಆಯ್ಕೆ ಪಟ್ಟಿಯಲ್ಲಿ ಪ್ರಕಟಿಸಲಾಗಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ರಾಯಚೂರು ಅಭ್ಯರ್ಥಿಗಳು ಧಾರವಾಡದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ರಾಯಚೂರು ಜಿಲ್ಲೆಯ ಸತೀಶ್, ಜಲಲರೆಡ್ಡಿ, ಅನೀಲ್, ಕವಿತಾ ಜಿ, ತೋಗಾಂವ, ಪ್ರಿಯಾಂಕ್ ಬಸವರಾಜ್, ಅಜ್ಜಪ್ಪ, ಶರಣಪ್ಪ, ಪೂರ್ಣಚಂದ್ರ ಹಾಗೂ ಅನುರಾಜ್ ಎಂಬುವವರು ದಾಖಲೆಗಳ ಪರಿಶೀಲನೆಗೆ ಹಾಜರಾಗದೇ ಇದ್ದರೂ ಅವರ ಹೆಸರನ್ನು ತಾತ್ಕಾಲಿಕವಾಗಿ ಆಯ್ಕೆ ಪಟ್ಟಿಯಲ್ಲಿ ಪ್ರಕಟಿಸಲಾಗಿದೆ. ಸ್ವತ: ಈ ಅಭ್ಯರ್ಥಿಗಳು ತಾವು ದಾಖಲೆಗಳ ಪರಿಶೀಲನೆಗೆ ಹಾಜರಾಗಿಲ್ಲ ಎಂದು ಹೇಳಿಕೊಂಡಿದ್ದಾರೆ.
ಇದರಿಂದ ಪರೀಕ್ಷೆ ಬರೆದ ಹಲವು ಅಭ್ಯರ್ಥಿಗಳಿಗೆ ಅನ್ಯಾಯವಾಗಿದ್ದು, ತನಿಖೆ ಕೈಗೊಳ್ಳಬೇಕು ಹಾಗೂ ಪ್ರಸ್ತುತ ಆಯ್ಕೆಪಟ್ಟಿ ತಡೆಹಿಡಿದು ಮರುಪಟ್ಟಿ ಬಿಡುಗಡೆ ಮಾಡಬೇಕು ಎಂದು ರಾಯಚೂರು ಅಭ್ಯರ್ಥಿಗಳು ಒತ್ತಾಯಿಸಿದ್ದಾರೆ.
ಆಟೋದಲ್ಲಿ ನಿಗೂಢ ಸ್ಫೋಟ; ಓರ್ವನನ್ನು ವಶಕ್ಕೆ ಪಡೆದ ಪೊಲೀಸರು
https://pragati.taskdun.com/mangaloreauto-blastaccused-arrest/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ