ವಿದ್ಯಾರ್ಥಿನಿಗೆ ಹೊಡೆದ ಶಿಕ್ಷಕಿಗೆ 3 ವರ್ಷ ಜೈಲು

 ಪ್ರಗತಿ ವಾಹಿನಿ ಸುದ್ದಿ ತುಮಕೂರು: ವಿದ್ಯಾರ್ಥಿನಿಯನ್ನು ಥಳಿಸಿದ ಆರೋಪದಲ್ಲಿ ಶಿಕ್ಷಿಯೊಬ್ಬರಿಗೆ ತುಮಕೂರಿನ ನ್ಯಾಯಾಲಯ ಮೂರು ವರ್ಷ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ರಹತ್ ಫಾತಿಮಾ ಎಂಬುವವರೇ ಶಿಕ್ಷೆಗೆ ಗುರಿಯಾದ ಶಿಕ್ಷಕಿ. 2011 ರಲ್ಲಿ ಈ ಘಟನೆ ನಡೆದಿತ್ತು. ಸರಿಯಾಗಿ ಓದಲಿಲ್ಲ ಎಂದು ಶಿಕ್ಷಕಿ ವಿದ್ಯಾರ್ಥಿನಿಯೊಬ್ಬಳಿಗೆ ಥಳಿಸಿದ್ದರು.‌ ಇದರಿಂದ ವಿದ್ಯಾರ್ಥಿನಿಯ ಕಣ್ಣಿಗೆ ಗಾಯವಾಗಿತ್ತು.‌

ಸ್ಥಳೀಯ ಪೊಲೀಸರು ತನಿಖೆ ನಡೆಸಿ ನ್ಯಾಯಾಲಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಸ್ತುತ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಶಿಕ್ಷಕಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಖಾನಾಪುರ: ಲಂಚಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿದ ಇಬ್ಬರು ಪೊಲೀಸರು ಸೇರಿ ನಾಲ್ವರ ಬಂಧನ

Related Articles

Back to top button